ಬೆಂಗಳೂರು: 30 ಜಿಲ್ಲೆಗಳಿಗೆ ಲಕ್ಷ ಕೊರೋನಾ ಕಿಟ್ ಹಂಚಿಕೆ

Source: S.O. News Service | By I.G. Bhatkali | Published on 19th April 2020, 12:12 AM | State News |

ಬೆಂಗಳೂರು: ರಾಜ್ಯ ಸರ್ಕಾರ ಕೊವಿಡ್- 19 ಪರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸುವುದಕ್ಕಾಗಿ ರೆಡ್‍ಝೋನ್ ಜಿಲ್ಲೆಗಳಿಗೆ 66 ಸಾವಿರ ಟೆಸ್ಟ್ ಕಿಟ್ ಹಾಗೂ ಇದುವರೆಗೂ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಗ್ರೀನ್‍ಝೋನ್ ಜಿಲ್ಲೆಗಳಿಗೆ 34 ಸಾವಿರ ಟೆಸ್ಟ್ ಕಿಟ್‍ಗಳನ್ನು ಹಂಚಿಕೆ ಮಾಡಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಿದ್ದು, ಒಟ್ಟು 30 ಜಿಲ್ಲೆಗಳಿಗಾಗಿ 1 ಲಕ್ಷ ಟೆಸ್ಟ್ ಕಿಟ್‍ಗಳನ್ನು ಖರೀದಿಸಿ ಹಂಚಿಕೆ ಮಾಡಿದೆ. ಈ ಮಧ್ಯೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯು ರಾಜ್ಯದಲ್ಲಿ ಹೊಸದಾಗಿ 16 ಕೋವಿಡ್- 19 ಪ್ರಯೋಗಾಲಯಗಳನ್ನು (11 ಸರ್ಕಾರಿ ಹಾಗೂ 5 ಖಾಸಗಿ ಪ್ರಯೋಗಾಲಯ) ಆರಂಭಿಸಲು ಅನುಮತಿ ನೀಡಿದೆ.
ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್- 19 ಪರೀಕ್ಷೆಗೆ 2,250 ರೂಪಾಯಿ ದರ ನಿಗದಿ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
***

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...