ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ-ರಾಜ್ಯದಲ್ಲಿ ಕಟ್ಟೆಚ್ಚರ

Source: uni | Published on 3rd August 2020, 1:18 AM | State News | Don't Miss |

ಬೆಂಗಳೂರು;ಇದೇ ಆಗಸ್ಟ್​ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿರುವ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲು ಎಲ್ಲಾ ವಲಯದ ಐಜಿಪಿಗಳು ಹಾಗೂ ಎಸ್​ಪಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ )ಅಮರ್ ಕುಮಾರ್ ಪಾಂಡೆ ಸೂಚನೆ ನೀಡಿದ್ದಾರೆ.
ಆಗಸ್ಟ್​ 5 ರಂದು ರಾಜ್ಯದ ನಾನಾ ದೇವಸ್ಥಾನಗಳಲ್ಲೂ ಪೂಜೆ ನಡೆಸಿ, ಸಿಹಿ ಹಂಚಲಿದ್ದಾರೆ. ಈ ವೇಳೆ ಯಾವುದೇ ಅಹಿತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕು. ಭೂಮಿ ಪೂಜೆ ನಡೆಯುವ ದಿನ ಕೆಲವು ಮತೀಯ ಸಂಘಟನೆಗಳು ಗಲಭೆ ಸೃಷ್ಟಿಸುವ ಸಾಧ್ಯತೆಯಿದ್ದು ತೀವ್ರ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭದ್ರತೆ ಕಾಪಾಡಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುವುದರ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಿದ್ದಾರೆ.
ಭದ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ಬೆಳಗ್ಗೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಿದ್ದಾರೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...