ವಿಜಯಪುರದ ವಿಮಾನ ನಿಲ್ದಾಣಕ್ಕೆ ಭೂಮಿ ಪೂಜೆ :

Source: SO News | By Laxmi Tanaya | Published on 22nd December 2020, 10:21 PM | State News |

ವಿಜಯಪುರ : ನಗರದ ಹೊರ ವಲಯದಲ್ಲಿ ಸುಮಾರು 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿಮಾನನಿಲ್ದಾಣ ಕಾಮಗಾರಿಗೆ ಗ್ರಾ.ಪಂ. ಚುನಾವಣೆ ನೀತಿ ಸಂಹಿತೆ ಮುಕ್ತಾಯವಾದ ಕೂಡಲೇ ಭೂಮಿಪೂಜೆ ನೆರವೇರಿಸಲಾಗುವುದು. ಈ ವಿಮಾನ ನಿಲ್ದಾಣ ಅಭಿವೃದ್ಧಿಯಿಂದ ಉತ್ತರ ಕರ್ನಾಟಕದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಹಾಗೂ ವಿಜಯಪುರ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಉಪಮುಖ್ಯಮಂತ್ರಿಗಳು ಹೇಳಿದರು.

 ಸುದ್ದಿಗೋಷ್ಠಿಯಲ್ಲಿ ಲೋಕೋಪಯೋಗಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಗುರುಪ್ರಸಾದ, ಉತ್ತರ ವಲಯದ ಮುಖ್ಯ ಇಂಜಿನೀಯರ್ ಶಂಕರಗೌಡ ಪಾಟೀಲ, ಧಾರವಾಡ ವಿಭಾಗದ ಅಧೀಕ್ಷಕ ಇಂಜಿನೀಯರ್ ಶಿವಾನಂದ ನಾಯಕ್, ಕಾರ್ಯನಿರ್ವಾಹಕ ಇಂಜಿನೀಯರ್ ಎಸ್.ಬಿ. ಚೌಡಣ್ಣವರ ಮತ್ತಿತರರು ಉಪಸ್ಥಿತರಿದ್ದರು. 

ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ: ಧಾರವಾಡದಲ್ಲಿ ಇಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರಾದ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಇಂದು  ಲೋಕೋಪಯೋಗಿ ಮುಖ್ಯ ಅಭಿಯಂತರರ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ. ಗುರುಪ್ರಸಾದ, ಮುಖ್ಯ ಅಭಿಯಂತರ ಶಂಕರಗೌಡ ಪಾಟೀಲ, ಅಧೀಕ್ಷಕ ಇಂಜಿನಿಯರ್ ಶಿವಾನಂದ ನಾಯ್ಕ, ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ. ಚೌಡಣ್ಣವರ ಮತ್ತಿತರರು ಉಪಸ್ಥಿತರಿದ್ದರು.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...