ಕಾರವಾರ: 37 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿದ ಶಾಸಕಿ

Source: S O News Service | By Office Staff | Published on 25th February 2020, 10:43 PM | Coastal News |

ಕಾರವಾರ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರಾಮೀಣ ಭಾಗದ 37 ವಿದ್ಯಾರ್ಥಿಗಳಿಗೆ ಮಂಗಳವಾರ ಶಾಸಕಿ ರೂಪಾಲಿ ನಾಯ್ಕ ಅವರು ಉಚಿತವಾಗಿ ಲ್ಯಾಪ್‍ಟಾಪ್ ವಿತರಣೆ ಮಾಡಿದರು.

ಇಲ್ಲಿನ ಕನ್ನಡ ಭನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿದ ಅವರು, ‘ಸರಕಾರ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ವಿತರಿಸುತ್ತಿದೆ. ಈ ಹಿಂದೆ ಯಾವ ಸರಕಾರ ಕೂಡ ಈ ಯೋಜನೆ ಹಮ್ಮಿಕೊಂಡಿರಲಿಲ್ಲ. ಆದರೆ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತಂದಿದ್ದಾರೆ’ ಎಂದು ಹೇಳಿದರು.

‘ಈಗಾಗಲೇ ಮಹಿಳಾ ಕಾಲೇಜಿಗೆ ಜಾಗ ಗುರುತು ಮಾಡಿ, 3 ಕೋಟಿ ವೆಚ್ಚದ ಅನುದಾನ ಬಿಡುಗಡೆ ಮಾಡಿ, ಅತಿದೊಡ್ಡ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣ ಮಾಡುವುದು ನನ್ನ ದೊಡ್ಡ ಕನಸಾಗಿದೆ. ಈಗಾಗಲೇ ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಉಪಯೋಗ ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಕಲಿಯುವಂತ ದಾರಿ ಒಳ್ಳೆಯದಾಗಿದರೆ ಅವರು ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗಲಿದೆ’ ಎಂದು ಕಿವಿಮಾತು ಹೇಳಿದರು.

ಈ ವೇಳೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಕೆ.ಪಿ.ಗಂಗೊಳ್ಳಿ, ವಿದ್ಯಾರ್ಥಿಗಳಾದ ಸುವರ್ಣ ಹಾಗೂ ಬಾಲಚಂದ್ರ ಇದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...