ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣಿಗೆ ಅಕ್ಟೋಬರ್ 31 ಕೊನೆ ದಿನ.

Source: SO News | By Laxmi Tanaya | Published on 8th October 2020, 3:16 PM | Coastal News | Don't Miss |

ಭಟ್ಕಳ : ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಹೇಳಿದ್ದಾರೆ.

ಭಟ್ಕಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಹೆಲ್ತ್ ಕಾರ್ಡ್ ಮೂಲಕ  ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಕಾರ್ಡ್ ಸ್ಮಾರ್ಟ್ ಕಾರ್ಡನ್ನು ಪರಿಚಯಿಸುತ್ತಿದ್ದೇವೆ. ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಮತ್ತು ಸ್ಮಾರ್ಟ್ ಕಾರ್ಡನ್ನು ತಮ್ಮ ಪೋಕೆಟ್ಗಳಲ್ಲಿ ಇಟ್ಟುಕೊಳ್ಳಬಹುದು. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ" ಎಂದು ಹೇಳಿದರು.

  ಮಣಿಪಾಲ ಆರೋಗ್ಯಕಾರ್ಡ್ ಯೋಜನೆ, ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯಾಗಿ ಲಭ್ಯವಿದ್ದು, ಈ ವರ್ಷದಿಂದ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ‌ ಎಂದರು.  ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 250/-, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 650/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 400/-, ಕುಟುಂಬಕ್ಕೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ₹ 850/- ಇರುತ್ತದೆ. ಮಣಿಪಾಲ ಆರೋಗ್ಯ ಕಾರ್ಡನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.

ಮಣಿಪಾಲ ಆರೋಗ್ಯ ಕಾರ್ಡ್ ನ್ನು ಉಪಯೋಗಿಸಿ, ಈ ಕೆಳಕಂಡ ಸೌಲಭ್ಯಗಳನ್ನು ಪಡೆಯಬಹುದು:
ವೈದ್ಯರ ಸಮಾಲೋಚನೆ 50% ರಿಯಾಯಿತಿ
ಪ್ರಯೋಗಾಲಯ ಪರೀಕ್ಷೆ 30% ರಿಯಾಯಿತಿ
ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ 25% ರಿಯಾಯಿತಿ
ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್‌, 20% ರಿಯಾಯಿತಿ
ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ 20% ರಿಯಾಯಿತಿ
ಔಷಧಾಲಯಗಳಲ್ಲಿ 12%ರವರೆಗೆ ರಿಯಾಯಿತಿ

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮಾರುಕಟ್ಟೆ ವಿಭಾಗದ ಮುಖ್ಯ ವ್ಯವಸ್ಥಾಪಕ  ಸಚಿನ್ ಕಾರಂತ್, ಉಪ ವ್ಯವಸ್ಥಾಪಕ  ಮೋಹನ್ ಶೆಟ್ಟಿ, ಸಹಾಯಕ ವ್ಯವಸ್ಥಾಪಕ ಕೃಷ್ಣಪ್ರಸಾದ ಬಿ ಎಸ್ ಮತ್ತು ಮಾರುಕಟ್ಟೆ ವಿಭಾಗದ ಪ್ರತಿನಿಧಿ ರಾಜೇಂದ್ರ ನಾಯ್ಕ ರವರು ಸಹ ಉಪಸ್ಥಿತರಿದ್ದರು.

2020ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಸೈಂಟ್ ಮಿಲಾಗ್ರೇಸ್ ಸೌಹಾರ್ದದ ಎಲ್ಲಾ ಶಾಖೆಗಳು: ಭಟ್ಕಳ : 9538894590, ಮುರುಡೇಶ್ವರ: 9538020303, ಶಿರಾಲಿ :  8277099156.
ಗೌರಿಶಂಕರ್ ಮೊಗೇರ್ : 8722540496, ರಾಧಾಕೃಷ್ಣ ಭಟ್ : 9448221117, ಯುವರಾಜ್ : 9964888755

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...