ಕಾರವಾರ: ರೈತರು ವಿಮಾ ಕಂತು ಪಾವತಿಸಲು ಜೂನ್ 30 ಕೊನೆಯದಿನ

Source: S O News Service | By I.G. Bhatkali | Published on 4th June 2019, 7:51 PM | Coastal News |

ಕಾರವಾರ: ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು  ಅನುಷ್ಟಾನಗೊಳಿಸಲು, ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು ಜೂನ 30 ಕೊನೆಯ ದಿನವಾಗಿರುತ್ತದೆ.  

ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯವಿದ್ದು, ಅಡಿಕೆ ಬೆಳೆಯ ವಿಮಾ ಮೊತ್ತ ರೂ. 1,28,000 ಪ್ರತಿ ಹೆಕ್ಟೇರ್ ಆಗಿದ್ದು, ರೈತರು ಭರಿಸುವ ಪ್ರೀಮಿಯಂ ಮೊತ್ತ ರೂ. 6,400 ಪ್ರತಿ ಹೆಕ್ಟೇರ್ (ವಿಮಾ ಮೊತ್ತದ 5%) ಆಗಿರುತ್ತದೆ. ಕಾಳುಮೆಣಸು ಬೆಳೆಯ ವಿಮೆ ಮೊತ್ತ ರೂ. 47,000 ಪ್ರತಿ ಹೆಕ್ಟೇರ್‍ಗೆ ಆಗಿದ್ದು, ರೈತರು ರೂ. 2,350/ ಹೆಕ್ಟೇರ್‍ಗೆ (ವಿಮಾ ಮೊತ್ತದ 5%) ಪಾವತಿಸಬೇಕು.  ನಿಗದಿತ ಅರ್ಜಿ ನಮೂನೆ, ಬ್ಯಾಂಕ್ ಪಾಸ್ ಪುಸ್ತಕದ ಯಥಾ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ ಮತ್ತು ಆಧಾರ್ ಕಾರ್ಡ್‍ನ ಪ್ರತಿಯೊಂದಿಗೆ ಸಂಬಂಧಿತ ಬ್ಯಾಂಕ್ ಶಾಖೆಯಲ್ಲಿ ಅಂತಿಮ ದಿನಾಂಕದ ಒಳಗಾಗಿ ನೊಂದಾವಣೆ ಮಾಡಿಕೊಳ್ಳಬಹುದಾಗಿದೆ. 

ಪ್ರಸಕ್ತ ಸಾಲಿಗೆ ಉತ್ತರ ಕನ್ನಡ ಜಿಲ್ಲೆಗೆ ಒರಿಯೆಂಟಲ್ ಆಯ್‍ಸಿ., ಇವರನ್ನು ವಿಮಾ ಸಂಸ್ಥೆಯನ್ನಾಗಿ ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕಾ ಇಲಾಖೆಯ ಕಛೇರಿ ಅಥವಾ ಹತ್ತಿರದ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಬಹುದಾಗಿದೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...