“ಸ್ವಚ್ಚ ಮೇವ ಜಯತೇ” ಅಂಗವಾಗಿ ಸ್ವಚ್ಚತಾ ರಥದ ಕಲಾಜಾಥಾ ಕಾರ್ಯಕ್ರಮಕ್ಕೆ ಚಾಲನೆ’’ ತಾಜ್ಯ ಮುಕ್ತ ಜಿಲ್ಲೆಯಲ್ಲಿ ಉ ಕ ಜಿಲ್ಲೆ ಪ್ರಥಮವಾಗಲಿ : ಜಿ.ಪಂ. ಅಧ್ಯಕ್ಷೆ

Source: S.O. News Service | Published on 16th September 2019, 8:23 PM | Coastal News | Don't Miss |


ಕಾರವಾರ  : ಜಿಲ್ಲೆಯನ್ನು ಸ್ವಚ್ಚ ಜಿಲ್ಲೆಯನ್ನಾಗಿ ಮಾಡಬೇಕಾಗಿರುವುದು ಎಲ್ಲರ ಜವಾಬ್ಧಾರಿಯಾಗಿದೆ.  ತಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡಿ ನಮ್ಮ ಉತ್ತರ ಕನ್ನಡ ಜಿಲ್ಲೆಯನ್ನು  ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ನಿಲ್ಲಿಸುವಂತಹ ಕಾರ್ಯವನ್ನು ಮಾಡಬೇಕಾಗಿದೆ ಎಂದು  ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ ಅವರು ಹೇಳಿದರು. 
 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಸ್ವಚ್ಚ ಭಾರತ ಮಿಷನ್(ಗ್ರಾ) ಯೋಜನೆಯಡಿ ಸಂಚಾರಿ ವಾಹನದ ಮೂಲಕ ಹಮ್ಮಿಕೊಂಡಿರುವ ‘ಸ್ವಚ್ಚತಾ ರಥ’ ಕಲಾಜಾಥಾ ಕಾರ್ಯಕ್ರಮಕ್ಕೆ ಸೋಮವಾರ  ಜಿಲ್ಲಾ ಪಂಚಾಯತ್ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. 
ಕಲಾಜಾಥಾದ ಕಲಾವಿದರು ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಚತೆಯ ಬಗ್ಗೆ ಜಾನಪಧದ ಮೂಲಕ ಅರಿವು ಮೂಡಿಸುತ್ತಿದ್ದು, ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.  
 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಮ್ ರೋಶನ್ ಅವರು ಮಾತನಾಡಿ ಈಗಾಗಲೇ ಗೋಕರ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ಮಾಡಲಾಗಿದ್ದು, ಇದರಿಂದ ಉತ್ತಮ ಸ್ಪಂದನೆ ದೊರಕಿರುತ್ತದೆ. ಮುಂದಿನ ದಿನಗಳಲ್ಲಿ ಇನ್ನುಳಿದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸುವ ಮೂಲಕ ಸ್ವಚ್ಚ ಗ್ರಾಮ ಯಶೋಗಾಥೆ ಹಾಡಲಾಗುವುದು ಎಂದು ಅವರು ಹೇಳಿದರು.  
ಜಿಲ್ಲೆಯ 80 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಂದಿನ 40 ದಿನಗಳವರೆಗೆ, ಪ್ರತಿ ದಿನಕ್ಕೆ ಎರಡು ಗ್ರಾಮ ಪಂಚಾಯತ್‍ಗಳಿಗೆ ಸ್ವಚ್ಚರಥದ ಕಲಾಜಾಥಾ  ಭೇಟಿ ನೀಡಿ, ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲಿದೆ.
ಈ ಕಲಾಜಾಥಾ ಕಾರ್ಯಕ್ರಮದ ಮೂಲಕ ಸಂಚಾರಿ ವಾಹನ ತೆರಳಿದ್ದು, ಕಲಾವಿದರು ಬೀದಿನಾಟಕ, ಹಾಡು, ಜಾನಪದ ಗೀತೆಗಳ ಮೂಲಕ ಜನಜಾಗೃತಿ ಮೂಡಿಸಲಿದ್ದಾರೆ.
ಕಲಾಜಾಥಾ ಭೇಟಿ ನೀಡುವ ಗ್ರಾಮಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ವಚ್ಚರಥ ಕಾರ್ಯಕ್ರಮದ ಮಾಹಿತಿಯನ್ನು  ಪ್ರಚಾರ ಮಾಡುವರು ಸಾರ್ವಜನಿಕರು ಇದರ ಸದುಪಯೋಗ ಪಡೆಯುಬೇಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ನಾಯ್ಕ, ತಾಲೂಕು ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಅಧ್ಯಕ್ಷ ಪುರುಷೋತ್ತಮ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಲಾವಿದರು ಕಲಾಜಾಥಾದಲ್ಲಿ ಬೀದಿನಾಟಕ, ಜಾನಪದ ಹಾಡು ಪ್ರಸ್ತುತಪಡಿಸಿದರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...