ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪ ಶಾಸಕ ಸುನೀಲ್ ನಾಯ್ಕ ದೂರು

Source: so news | By MV Bhatkal | Published on 23rd August 2021, 7:25 PM | Coastal News | Don't Miss |

ಭಟ್ಕಳ: ಫೇಸ್‌ಬುಕ್‌ನಲ್ಲಿ ಸುನೀಲ ಅಣ್ಣನ ಅಭಿಮಾನಿ ಎನ್ನುವ ನಕಲಿ ಖಾತೆಯಲ್ಲಿ ಶಾಸಕ ಸುನೀಲ ನಾಯ್ಕ ಕುರಿತು ಚಾರಿತ್ರ್ಯ ಹರಣ ಮಾಡುತ್ತಿದ್ದು, ಆ ಖಾತೆ ಯನ್ನು ತಡೆಹಿಡಿದು ಅದರಲ್ಲಿ ಬರೆಯುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಆಪ್ತ ಸಹಾಯಕ ರಾಘವೇಂದ್ರ ಶಿರಾಲಿ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.ದೂರಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ ಬುಕ್‌ನ ಸುನೀಲ ಅಣ್ಣನ ಅಭಿಮಾನಿ ಗ್ರೂಪಿನಲ್ಲಿ ಶಾಸಕ ಸುನೀಲ ನಾಯ್ಕ ಅವರ ಚಾರಿತ್ರ್ಯ ಹರಣ ಮಾಡುವುದು ಮುಂದುವರಿದಿದೆ. ಕ್ಷೇತ್ರದಲ್ಲಿ ಬೇರೆ ಬೇರೆ ಸಮುದಾಯದ ಜನರು ಶಾ೦ತಿ ಸೌಹಾರ್ದದಿ೦ದ ಸಹಬಾಳ್ವೆ ಮಾಡುತ್ತಿದ್ದು, ಎಲ್ಲ ಸಮುದಾಯದವರು ಶ್ರಮಿಸಿ ಶಾಸಕರ ಗೆಲುವಿಗೆ ಕಾರಣವಾದ ಅಂಶವನ್ನು ಸಹಿಸದ ಕೆಲ ಹಿತಾಸಕ್ತಿಗಳು ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿಸಿ ಸಮುದಾಯಗಳ ಮಧ್ಯದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಇದರಿಂದ ಸಾರ್ವಜನಿಕ ಕಾರ್ಯಕ್ರಮಗಳಿಗೆ ತೀವ್ರ ತೊಡಕಾಗುತ್ತಿರುವುದರಿಂದ ನಕಲಿ ಫೇಸ್‌ಬುಕ್ ಖಾತೆಯನ್ನು ತಡೆಹಿಡಿಯುವುದರ ಜೊತೆಗೆ ಅವಹೇಳ ನಕಾರಿಯಾಗಿ ಬರೆಯುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪ್ರಕರಣ ದಾಖಲಿಸಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...