ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ. ಒಂದು ವರ್ಷದಲ್ಲಿ ಬಳಕೆಗೆ ಸಿದ್ದ: ಸಚಿವ ರಾಮಲಿಂಗಾರೆಡ್ಡಿ

Source: SO News | By Laxmi Tanaya | Published on 8th January 2024, 9:56 PM | State News | Don't Miss |

ಧಾರವಾಡ : ಧಾರವಾಡದ ನಗರ ಸಾರಿಗೆಯ ನೂತನ ಸಿಬಿಟಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಬೆಳಿಗ್ಗೆ ಧಾರವಾಡ ಸಿಬಿಟಿ ಆವರಣದಲ್ಲಿ ಶಂಕು ಸ್ಥಾಪನೆ ನೆರವೇರಿಸಿ, ಭೂಮಿ ಪೂಜೆ ಮಾಡಿದರು.

ನಂತರ ಅವರು ಮಾತನಾಡಿ,  ಧಾರವಾಡ ನಗರ ಸಾರಿಗೆಯ ಸಿಬಿಟಿ ಬಸ ನಿಲ್ದಾಣಕ್ಕೆ ಅಗತ್ಯವಿರುವ ನೂತನ ಕಟ್ಟಡವನ್ನು 13.11 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ. ಈಗ ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಒಂದು ವರ್ಷದ ಅವಧಿಯಲ್ಲಿ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಚಿವರು ತಿಳಿಸಿದರು. 

ನಗರ ಸಾರಿಗೆ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಚ್ಚುವರಿ ಬಸ್‍ಗಳ ಖರೀದಿ ಮಾಡಲಾಗುತ್ತಿದ್ದು, ಇದರಿಂದ ಬಸ್‍ಗಳ ಕೊರತೆ ನೀಗಲಿದೆ. ಅಂದಾಜು 50 ವರ್ಷಗಳ ಹಳೆಯದಾದ ಧಾರವಾಡದ ಸಿಬಿಟಿಯನ್ನು ಇದೀಗ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

13.11 ಕೋಟಿ ರೂ.ಗಳಲ್ಲಿ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ  ಕಾಮಗಾರಿ, 23.48 ಕೋಟಿ ರೂ.ಗಳಲ್ಲಿ ಹುಬ್ಬಳ್ಳಿ ಗೋಕುಲ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿಯಲ್ಲಿ ಮುಖ್ಯ ಕಟ್ಟಡ, ಮಹಿಳೆಯರಿಗೆ ವಿಶ್ರಾಂತಿ ಗೃಹ, ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕವಾಗಿ ಶೌಚಾಲಯ, ಆವರಣದಲ್ಲಿ ಕಾಂಕ್ರೀಟ್ ಅಳವಡಿಸುವುದು, ಬಸ್‍ಗಳ ನಿಲುಗಡೆಗೆ 4 ಅಂಕಣ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ (ಆರ್.ಓ.ಪ್ಲಾಂಟ್), ವಿದ್ಯುತ್ ಕೆಲಸ, ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಮುಖ್ಯ ಕಟ್ಟಡದ ನೆಲಹಾಸುಗೆ ಗ್ರಾನೈಟ್ ಅಳವಡಿಸುವುದು, ಉಪಹಾರ ಗೃಹ ಮತ್ತು ವಾಣಿಜ್ಯ ಮಳಿಗೆಗಳು, ಸಿಬ್ಬಂದಿ ವಿಶ್ರಾಂತಿ ಕೊಠಡಿ ಹಾಗೂ ಸಂಚಾರ ನಿಯಂತ್ರಣಾ ಕೊಠಡಿ, ಮೊದಲನೇ ಮಹಡಿಯಲ್ಲಿ ಕಛೇರಿ ಉಪಯೋಗಕ್ಕಾಗಿ ಕೊಠಡಿ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು. 

ಕಾರ್ಮಿಕ ಸಚಿವರು ಹಾಗೂ ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಮಾತನಾಡಿದರು. ಶಾಸಕ ಎನ್.ಎಚ್.ಕೋನರಡ್ಡಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...