ಕಾರವಾರ: ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಉಪನ್ಯಾಸ

Source: S O News | By I.G. Bhatkali | Published on 21st November 2023, 7:15 PM | Coastal News |

 ಕಾರವಾರ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ , ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು, ಕೋಸ್ಟಲ್ & ಮರೈನ್ ಇಕೋಸಿಸ್ಟಮ್ ಘಟಕ, ಹಾಗೂ ಸ್ವಾಮಿ ವೀವೆಕಾನಂದ ಪ್ರೌಢಶಾಲೆ, ಕೋಡಿಬಾಗ ಇವರ ಸಹಯೋಗದಲ್ಲಿ ವಿಶ್ವ ಮೀನುಗಾರಿಕಾ ದಿನಾಚಾರಣೆಯ ಅಂಗವಾಗಿ ಕೋಡಿಬಾಗದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮವನ್ನು ಇಂದು ಸ್ವಾಮಿ ವೀವೆಕಾನಂದ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಡಲ ಜೀವಶಾಸ್ತç ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ. ವಿ.ಎನ್. ನಾಯಕ ಮಾತನಾಡಿ, ಮೀನುಗಾರಿಕಾ ದಿನ ಆಚರಣೆಯ ಉದ್ದೇಶ, ಮೀನು ಹಿಡಿಯುವ ಸರಿಯಾದ ವಿಧಾನಗಳು, ಮೀನುಗಳ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ತಿಳಿಸಿದರು.

ಸಹಾಯಕ ವಲಯ ಅರಣ್ಯಾಧಿಕಾರಿ ಚಂದ್ರಶೇಖರ ಕಟ್ಟಿಮನಿ, ಆಮೆಗಳ ವಿಧಗಳು, ಭಾರತದಲ್ಲಿ ಲಭ್ಯವಿರುವ ಆಮೆಗಳು, ಆಮೆಗಳ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆಯ ಪಾತ್ರ ಮತ್ತು ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. 
ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಮುಖ್ಯೋಧ್ಯಾಪಕ ಪಿ. ಮಯೇಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಸದಸ್ಯ ಕಾರ್ಯದರ್ಶಿ ಡಾ. ಸಂಜೀವ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. 

ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಶೈಕ್ಷಣಿಕ ಸಹಾಯಕಿ ಕವಿತಾ ಎಲ್.ಬಾಡಕರ ನಿರೂಪಿಸಿದರು. ಸ್ವಾಮಿ ವೀವೆಕಾನಂದ ಪ್ರೌಢಶಾಲೆ ಗಣಿತ ಶಿಕ್ಷಕ ವಿಕ್ರಾಂತ ತಾಂಡೇಲ ವಂದಿಸಿದರು.
 

Read These Next

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...