ಉತ್ತರ ಕನ್ನಡ: ಉಪ ಲೋಕಾಯುಕ್ತರಿಂದ ಕಾನೂನು ವಿಚಾರಣೆ

Source: SO News Service | Published on 5th March 2024, 1:51 PM | Coastal News | Don't Miss |

ಕಾರವಾರ : ಕಾರವಾರದ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ನಿಬಂಧಕರು, ಉಪನಿಬಂಧಕರು, ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಪೋಲಿಸ್ ಅಧೀಕ್ಷಕರು, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಇನ್ನಿತರೆ ಪ್ರಮುಖರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...