ಗುರಿ ಸಾಧನೆಗೆ ಪ್ರಯತ್ನ ನಿರಂತರವಾಗಿರಲಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Source: SO News | By Laxmi Tanaya | Published on 23rd May 2022, 6:47 AM | Coastal News | Don't Miss |

ಉಡುಪಿ : ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

    ಅವರು  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು.

     ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ತಾವು ನಿಗಧಿಪಡಿಸಿಕೊಂಡಿರುವ ನಿಗಧಿತ ಗುರಿಯನ್ನು, ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಹಾಗೂ ಗ್ರಂಥಾಲಯಗಳಿಗೆ ಭೇಟಿ ನೀಡಿ, ಸಾಧನೆಗೆ ಅಗತ್ಯವಿರುವ ಪುಸ್ತಕಗಳನ್ನು  ಅಧ್ಯಯನ ಮಾಡಬೇಕು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಸುಸಜ್ಜಿತ ಮತ್ತು ಡಿಜಿಟಲ್ ಗ್ರಂಥಾಲಯ ಸೌಲಭ್ಯವಿದ್ದು, ಅದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು. 

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿಡಿಪಿಐ ಗೋವಿಂದ ಮಡಿವಾಳ, ಶಿಕ್ಷಣಾಧಿಕಾರಿ ಜಾಹ್ನವಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಅಶೋಕ್ ಕಾಮತ್ ಉಪಸ್ಥಿತರಿದ್ದರು.

     ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪುನೀತ್ ನಾಯಕ್, ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಾಯತ್ರಿ, ಕಾಳಾವರ ಸರಕಾರಿ ಪ್ರೌಢಶಾಲೆಯ ನಿಶಾ ಹಾಗೂ ಬೈಂದೂರು ಕಿರಿಮಂಜೇಶ್ವರ ಸಂದೀಪನ ಆಂಗ್ಲಮಾಧ್ಯಮ ಶಾಲೆಯ ಅಕ್ಷತಾ ಅವರನ್ನು ಸನ್ಮಾನಿಸಲಾಯಿತು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...