ಲಾಕ್‌ಡೌನ್ ಕಡೆಯ ಅಸ್ತ್ರವಾಗಲಿ. ರಾಜ್ಯಗಳಿಗೆ ಪ್ರಧಾನಿ ಮೋದಿ ಸಲಹೆ.

Source: SO News | By Laxmi Tanaya | Published on 21st April 2021, 8:04 AM | National News | Don't Miss |

ಹೊಸದಿಲ್ಲಿ:  ಕೊರೋನ ವೈರಸ್  ಸೋಂಕಿನ ಎರಡನೇ ಅಲೆ ದೇಶದಲ್ಲಿ ಚಂಡಮಾರುತದಂತೆ ಅಪ್ಪಳಿಸಿದೆ ಎಂದು ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. 

ಆದರೆ ಲಾಕ್‌ಡೌನ್ ಹೇರಿಕೆಯನ್ನು ಕಟ್ಟಕಡೆಯ ಅಸ್ತ್ರವಾಗಿ ಮಾತ್ರ ಬಳಸಬೇಕೆಂದು ಅವರು ರಾಜ್ಯಗಳಿಗೆ ತಿಳಿಸಿದ್ದಾರೆ. ದೇಶದ ಜನತೆ ಕಟ್ಟುನಿಟ್ಟಾಗಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಹಾಗೂ ಅಗತ್ಯ ಕೆಲಸಗಳಿಗೆ ಮಾತ್ರ ಮನೆಯಿಂದ ಹೊರಹೋಗಬೇಕೆಂದು ಅವರು ಕರೆ ನೀಡಿದ್ದಾರೆ.

 ದೇಶದ ಜನತೆಯನ್ನುದ್ದೇಶಿಸಿ ಮಂಗಳವಾರ ಮಾತನಾಡಿದ ಪ್ರಧಾನಿ, “ರಾಜ್ಯಗಳು ಲಾಕ್‌ಡೌನ್ ಹೇರಿಕೆಯನ್ನು ಕಟ್ಟಕಡೆಯ ಅಸ್ತವಾಗಿ ಮಾತ್ರ ಬಳಸಿಕೊಳ್ಳಬೇಕು. ಕೋವಿಡ್-19 ಹಾವಳಿ ಹೆಚ್ಚಿರುವ ಅತಿ ಸೂಕ್ಷ್ಮ ಕಂಟೈನೈಂಟ್ ವಲಯಗಳ ಬಗ್ಗೆ ಗಮನಹರಿಸಬೇಕು. ನಮ್ಮ ದೇಶದ ಜನತೆಯ ಆರೋಗ್ಯದ ಜೊತೆಗೆ ದೇಶದ ಆರ್ಥಿಕತೆಯ ಆರೋಗ್ಯದ ಬಗ್ಗೆಯೂ ನಾವು ಕಾಳಜಿ ವಹಿಸಬೇಕಾಗಿದೆ ಎಂದರು.

ಸದ್ಯಕ್ಕೆ ದೇಶದಲ್ಲಿ ಲಾಕ್‌ಡೌನ್‌ ಹೇರುವ ಚಿಂತನೆಯನ್ನು ಕೇಂದ್ರ ಸರಕಾರ ಹೊಂದಿಲ್ಲವೆಂದು ಪ್ರಧಾನಿ ಅವರು ತಮ್ಮ ಭಾಷಣದಲ್ಲಿ ಸಷ್ಟಪಡಿಸಿದರು.

“ಕೆಲವು ವಾರಗಳ ಕಾಲ ದೇಶದಲ್ಲಿ ಕೊರೋನ ಸೋಂಕಿನ ಪರಿಸ್ಥಿತಿ ನಿಯಂತ್ರಣದಲ್ಲಿತ್ತು. ನಾವು ಆಗಷ್ಟೇ ಕೋವಿಡ್-19 ಮೊದಲ ಅಲೆಯಿಂದ ಚೇತರಿಸಿಕೊಳ್ಳುತ್ತಿದ್ದೆವು. ಆದರೆ ಎರಡನೇ ಅಲೆಯು ಚಂಡಮಾರುತದಂತೆ ಅಪ್ಪಳಿಸಿದೆ'' .  ಸೋಂಕಿನಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಕೊರೋನ ಮಹಾಮಾರಿಯನ್ನು ನಿಯಂತ್ರಿಸುವ ಅತಿ ದೊಡ್ಡ ಸವಾಲು ಇಡೀ ದೇಶದ ಮುಂದಿದೆ. ಆದರೆ ದೃಢನಿರ್ಧಾರ ಹಾಗೂ ಸಂಕಲ್ಪದೊಂದಿಗೆ ನಾವು ಈ ಮಹಾಬಿಕ್ಕಟ್ಟನ್ನು ದಾಟಿಹೋಗಲಿದ್ದೇವೆ'' ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...