ಕೇರಳ,ಪಂಜಾಬ್ ಇತರರಿಗೆ ಮಾದರಿಯಾಗಲಿ-ಯೆಚೂರಿ

Source: sonews | By Staff Correspondent | Published on 21st January 2020, 11:03 PM | State News |

ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ದ ಪಂಜಾಬ್ ಹಾಗೂ ಕೇರಳ ಮುಖ್ಯಮಂತ್ರಿಗಳ ಕೈಗೊಂಡ ದಿಟ್ಟ ಕ್ರಮಗಳ ಮಾದರಿಯಲ್ಲಿಯೇ ಉಳಿದ ರಾಜ್ಯಗಳ ಮುಖ್ಯಮಂತ್ರಿ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ ಎಂದು ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ತಿಳಿಸಿದ್ದಾರೆ.

ಮಂಗಳವಾರ ಸಿಎಎ ವಿರೋಧಿಸಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪಕ್ಷಭೇದ ಮರೆತು ಪೌರತ್ವ ಕಾಯ್ದೆಯ ವಿರುದ್ದ ನಿರ್ಣಯ ಕೈಗೊಳ್ಳಲಿ ಎಂದು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಬರೀ ಸುಳ್ಳು ಹೇಳುವುದರಲ್ಲೇ ಮಗ್ನರಾಗಿದ್ದಾರೆ. ಅವರು ತಮ್ಮ ವಿದ್ಯಾಭ್ಯಾಸದ ಕುರಿತು ಸುಳ್ಳು ಹೇಳಿದ್ದಾರೆ. ಈಗ ಇಡೀ ದೇಶವನ್ನೇ ಅಪಾಯಕ್ಕೆ ಒಡ್ಡಬಹುದಾದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಬಗ್ಗೆ ಸುಳ್ಳು ಹೇಳುವ ಮೂಲಕ ಜನತೆಯ ಪೌರತ್ವವನ್ನು ಪ್ರಶ್ನಿಸುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಆರ್ಥಿಕತೆ ಕುಸಿದಿದೆ. ನಿರುದ್ಯೋಗಿಗಳ ಪ್ರಮಾಣ ಹೆಚ್ಚುತ್ತಲೆ ಇದೆ. ಜನತೆ ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಕಿಂಚಿತ್ತೂ ಗಮನ ವಹಿಸದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನರನ್ನು ಮತ್ತಷ್ಟು ಸಮಸ್ಯೆಗೆ ಈಡುಮಾಡುವಂತಹ ಕಾನೂನುಗಳನ್ನು ರೂಪಿಸಲು ಹೊರಟಿದೆ. ಇದರ ವಿರುದ್ಧ ಜನಪರ ಸಂಘಟನೆಗಳು, ಜಾತ್ಯತೀತ ಪಕ್ಷಗಳು ಸಂಘಟಿತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಹಿರಿಯ ನಾಯಕರು, ಪ್ರಗತಿಪರ ಚಿಂತಕರು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಚಾರವಾದಿ ಸ್ವಾಮಿ ಅಗ್ನಿವೇಶ್, ಮಾಜಿ ಸಚಿವ ಸಿಎಂ ಇಬ್ರಾಹಿಂ, ಪ್ರಿಯಾಂಕ ಖರ್ಗೆ, ರಾಜಶೇಖರ್ ಪಾಟಲ್, ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಸಿಪಿಎಂ ಮುಖಂಡರಾದ ಕೆ.ನೀಲಾ, ಮಾರುತಿ ಮಾನ್ಪಡೆ, ಶಾಸಕ ರಹೀಮ್, ಹಿರಿಯ ನ್ಯಾಯವಾದಿ ಸಿ.ಎಸ್.ದ್ವಾರಕಾನಾಥ್, ಶಾಸಕ ರಹೀಮ್ ಖಾನ್ ಮತ್ತಿತರರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...