ಮನೆ-ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಲಿ -ಡಾ. ಕೆ. ವಿದ್ಯಾಕುಮಾರಿ

Source: SO News | By Laxmi Tanaya | Published on 14th August 2023, 7:31 PM | Coastal News | Don't Miss |

ಉಡುಪಿ: ಸರ್ಕಾರದ ಸೂಚನೆಯಂತೆ ನನ್ನ ಮಣ್ಣು- ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 15 ರವರೆಗೆ ಜಿಲ್ಲೆಯ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಹೇಳಿದ್ದಾರೆ.

ಈ ಅಭಿಯಾನದಲ್ಲಿ ಜಿಲ್ಲೆಯ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ರಾಷ್ಟ್ರಧ್ವಜ ಹಾರಿಸುವ ಸಂದರ್ಭದಲ್ಲಿ ಧ್ವಜ ಶಿಷ್ಟಾಚಾರ ಪಾಲನೆ ಮಾಡಿ, ರಾಷ್ಟ್ರಧ್ವಜ ಹಾರಿಸಬೇಕು. 
ಈಗಾಗಲೇ ಜಿಲ್ಲೆಗೆ ರಾಷ್ಟ್ರ ಧ್ವಜಗಳನ್ನು ಹಂಚಿಕೆ ಮಾಡಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ರಾಷ್ಟ್ರಧ್ವಜ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ರಾಷ್ಟ್ರಧ್ವಜಕ್ಕೆ ರೂ.25.50 ದರ ನಿಗದಿಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರೂ ಇದರಲ್ಲಿ ಭಾಗವಹಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...