ಕಾರವಾರ: ಅಧಿಕಾರಿಗಳ ನಡುವೆ ಸಮನ್ವಯತೆ ಇರಲಿ -ಸಿಇಒ ಈಶ್ವರ ಕಾಂದೂ

Source: S O News | By I.G. Bhatkali | Published on 29th November 2023, 10:58 PM | Coastal News |

ಕಾರವಾರ: ಜಿಲ್ಲೆಯ ಜನತೆಗೆ ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ರಾಜ್ ಹಾಗೂ ನರೇಗಾ ಸಹಾಯಕ ನಿರ್ದೇಶಕರುಗಳು, ವಿವಿಧ ಅನುಷ್ಠಾನÀ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಿ , ನಿಗಧಿತ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ಬುಧವಾರ ಜರುಗಿದ ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅನುಷ್ಠಾನ ಇಲಾಖೆ ಅಧಿಕಾರಿಗಳ ತಿಂಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಮನೆಗಳ ನಿರ್ಮಾಣ, ಶುಚಿತ್ವ, ಕುಡಿಯುವ ನೀರು, ಅಂತರ್ಜಲ ವೃದ್ಧಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಂತಹ ಕಾಮಗಾರಿಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ. ಹೀಗಾಗಿ ವಿವಿಧ ನಿಗಮಗಳಡಿ ಆಯ್ಕೆಯಾಗಿರುವ ವಸತಿ ಮನೆಗಳ ಫಲಾನುಭವಿಗಳಿಗೆ ಮನವರಿಕೆ ಮಾಡಿ ಕೂಡಲೇ ಅಪೂರ್ಣಗೊಂಡ ಕಾಮಗಾರಿ ಪೂರ್ಣಗೊಳಿಸಬೇಕು. ವೈಯಕ್ತಿಕ ಹಾಗೂ ಸಮುದಾಯ ಶೌಚಾಲಯಗಳ ನಿರ್ಮಾಣ ಕಾಮಗಾರಿಗೆ ಪ್ರಥಮ ಪ್ರಾಶಸ್ತ್ಯ ಕೊಡಬೇಕು. ಕಸ ವಿಲೇವಾರಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ವಿವಿಧ ಅನುಧಾನಗಳ ಬಳಕೆ ಹಾಗೂ ಯೋಜನೆಗಳ ಹಣ ಸದುಪಯೋಗದ ಕುರಿತು ಪ್ರತಿ ತಿಂಗಳು ಸಾಮಾಜಿಕ ಲೆಕ್ಕ ಪರಿಶೋಧನೆಯ ಪ್ರಗತಿ ಪರಿಶೀಲನಾ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು. ಅಲ್ಲದೇ ನರೇಗಾ ಕೂಲಿಕಾರರ ಮಕ್ಕಳ ಆರೈಕೆಗಾಗಿ ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಸ್ಥಾಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗುರಿ ನಿಗದಿಪಡಿಸಿದ್ದು, ಆದಷ್ಟ್ಟು ಬೇಗ ಈ ಕುರಿತು ಪ್ರಗತಿ ಸಾಧಿಸಬೇಕು ಎಂದರು.

ಬರಗಾಲ ಘೋಷÀಣೆಯಾಗಿದ್ದು, ದುಡಿಯುವ ಕೈಗಳಿಗೆ ನರೇಗಾದಡಿ ಹೆಚ್ಚಿನ ಪ್ರಮಾಣದಲ್ಲಿ ಕೂಲಿ ಕೆಲಸ ಹಾಗೂ ವೈಯಕ್ತಿಕ ಕಾಮಗಾರಿ ತಲುಪಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು. ಆಯುಕ್ತಾಲಯದ ನಿಗದಿತ ಗುರಿಗೆ ಅನುಗುಣವಾಗಿ ಮಾನವ ದಿನಗಳ ಸೃಜನೆಗೆ ಮುಂದಾಗಬೇಕು. ಜೊತೆಗೆ ಮುಖ್ಯಮಂತ್ರಿಗಳ ಬಜೆಟ್ ಘೋಷÀಣೆಯ ಕಾಮಗಾರಿಗಳು ಸೇರಿದಂತೆ ಅಗತ್ಯ ಕಾಮಗಾರಿಗಳ ಪ್ರಗತಿ ಸುಧಾರಣೆಯತ್ತ ಗಮನಹರಿಸಬೇಕು ಎಂದು ತಿಳಿಸಿದರು.

ನಂತರ ಜೆಜೆಎಂ ಕಾಮಗಾರಿಯ ಪ್ರಗತಿ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಸಂಬAಧಿಸಿದ ಆರ್‌ಡಬ್ಲ್ಯುಎಸ್‌ನ ಇಇ, ಎಇಇ ಅವರಿಗಳಿಗೆ ಅಗತ್ಯ ಸಲಹೆ, ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಆಡಳಿತ ಹಾಗೂ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ, ಉಪ ಕಾರ್ಯದರ್ಶಿ ಜಕ್ಕಪ್ಪಗೋಳ, ಮುಖ್ಯ ಲೆಕ್ಕಾಧಿಕಾರಿ ಸತೀಶ್ ಪವಾರ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ಯೋಜನಾ ನಿರ್ದೇಶಕರು(ಡಿಆರ್‌ಡಿಎ) ಕರೀಂ ಅಸದಿ, ಸಹಾಯಕ ಕಾರ್ಯದರ್ಶಿ ಜಿ.ಆರ್. ಭಟ್, ಸಹಾಯಕ ಯೋಜನಾಧಿಕಾರಿ ಸುರೇಶ ನಾಯ್ಕ, ಆರ್‌ಡಬ್ಲ್ಯುಎಸ್‌ನ ಇಇ ಪ್ರಕಾಶ, ಎಲ್ಲ ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ರಾಜ್ ಹಾಗೂ ನರೇಗಾ ಸಹಾಯಕ ನಿರ್ದೇಶಕರುಗಳು, ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಪಿಆರ್‌ಇಡಿ ಹಾಗೂ ಆರ್‌ಡಬ್ಲ್ಯುಎಸ್‌ನ ಎಇಇ, ಜೆಇ, ಜಿಲ್ಲಾ ಪಂಚಾಯತ್‌ನ ಎಡಿಪಿಸಿ, ಡಿಪಿಎಂ, ಡಿಎಂಐಎಸ್, ಡಿಐಇಸಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read These Next

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...