ಹೊರಗುತ್ತಿಗೆ ನೌಕರರಿಗೆ ನ್ಯಾಯಯುತ ವೇತನ ಪೂರೈಸುವಲ್ಲಿ ನಾವು ಮಾದರಿ ಆಗೋಣ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Source: SO News | By Laxmi Tanaya | Published on 17th July 2023, 9:35 PM | State News | Don't Miss |

ಧಾರವಾಡ : ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಕಚೇರಿ ಕೆಲಸಕ್ಕೆ ನೇಮಿಸಿಕೊಳ್ಳುವ ಗುತ್ತಿಗೆ ನೌಕರರಿಗೆ ಸರ್ಕಾರದಿಂದ ನಿರ್ಧರಿತ ನ್ಯಾಯಯುತ ವೇತನ ದೊರೆಯುವಂತೆ ಜವಾಬ್ದಾರಿ ನಿರ್ವಹಿಸಿ, ಸರ್ಕಾರಿ ಇಲಾಖೆಗಳಾದ ನಾವು ಇತರರಿಗೆ ಮಾದರಿ ಆಗೋಣ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

 ಅವರು ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾರ್ಮಿಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಅರಿವು ಮೂಡಿಸುವ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.

 ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುವ ಪ್ರತಿ ಇಲಾಖೆ ಮುಖ್ಯಸ್ಥರು, ಅಧಿಕಾರಿಗಳು ಅವರಿಗೆ ನ್ಯಾಯಯುತ ವೇತನ ಸಿಗುವ ಖಾತರಿ ಮಾಡಿಕೊಳ್ಳಬೇಕು. 

 ಮಾನವ ಸಂಪನ್ಮೂಲ ಒದಗಿಸುವ ಏಜೆನ್ಸಿ ಅಥವಾ ಗುತ್ತಿಗೆದಾರ ಪ್ರಚಲಿತ ಜಾರಿಯಲ್ಲಿರುವ ಕಾನೂನುಗಳ ಪಾಲನೆ ಮಾಡುವಂತೆ ನೋಡಿಕೊಳ್ಳಬೇಕು. ಕೌಶಲ್ಯ ಮತ್ತು ಅಕೌಶಲ್ಯಯುತ ಕಾರ್ಮಿಕರಿಗೆ ನೀಡುವ ವೇತನ ಸರಿಯಾಗಿ ಸಿಗುವಂತೆ ಇಲಾಖಾ ಮುಖ್ಯಸ್ಥರು ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

 ವಲಯವಾರು ಉದ್ದಿಮೆಗಳಿಗೆ ಅಗತ್ಯವಿರುವ ಸಿಬ್ಬಂದಿಗಳಿಗೆ ಪ್ರತ್ಯೇಕವಾದ ವೇತನ ನಿಗದಿ ಆಗಿರುತ್ತದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಈ ಕುರಿತು ಉದ್ದಿಮೆದಾರರಿಗೆ ಅರಿವು ಮೂಡಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

 ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 

 ಕಾರ್ಮಿಕ ಇಲಾಖೆ ಬೆಳಗಾವಿ ಪ್ರಾದೇಶಿಕ ವಿಭಾಗದ ಉಪಕಾರ್ಮಿಕ ಆಯುಕ್ತರಾದ ಡಿ.ಜಿ. ನಾಗೇಶ ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

 ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಲಲಿತಾ ಲಮಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕಾರ್ಮಿಕ ಇಲಾಖೆ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು, ನಿಗಮ ಮಂಡಳಿಗಳ ಅಧಿಕಾರಿಗಳು ಭಾಗವಹಿಸಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...