ಬಡವ, ಬಲ್ಲಿದನೆಂಬ ಭೇದ ಮರೆತು ಸಶಕ್ತ ರಾಷ್ಟ್ರ ನಿರ್ಮಾಣ ಮಾಡೋಣ : ಕೋಟ ಶ್ರೀನಿವಾಸ ಪೂಜಾರಿ.

Source: SO News | By Laxmi Tanaya | Published on 26th January 2022, 4:44 PM | Coastal News | Don't Miss |

ಕಾರವಾರ : ಸ್ವಾತಂತ್ರ್ಯ ಗಳಿಸಿದ ಏಳು ದಶಕಗಳಲ್ಲಿ ಭಾರತೀಯರು ಅನೇಕ ಕ್ಷೇತ್ರಗಳಲ್ಲಿ ಗಣನೀಯ ಮತ್ತು ಗಂಭೀರ ಸಾಧನೆ ಮಾಡಿದ್ದೇವೆ.  ಕೃಷಿ, ವಿಜ್ಞಾನ, ತಂತ್ರಜ್ಞಾನ, ಕೈಗಾರಿಕೆ, ಬಾಹ್ಯಾಕಾಶ, ರಕ್ಷಣೆ, ವಾಣಿಜ್ಯ, ವ್ಯಾಪಾರ, ಶಿಕ್ಷಣ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಬಡತನ ಮತ್ತು ಅಸಮಾನತೆ ನಿವಾರಿಸುವಲ್ಲಿ ಭಾರತೀಯರ ಸಾಧನೆ ಶ್ಲಾಘನೀಯವಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ‌ ಹೇಳಿದರು.

ಬುಧವಾರದಂದು ಕಾರವಾರದ ಡಿಎಆರ್ ಪೊಲೀಸ್ ಮೈದಾನದಲ್ಲಿ 73 ನೇ ಗಣರಾಜ್ಯೋತ್ಸವ ದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆಯಿರಿಸಿದ್ದು,  ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂಬ ಆಶಯದಿಂದ ನಮ್ಮ ಸರ್ಕಾರ ದೂರದೃಷ್ಟಿಯ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ. ಸರ್ವರಿಗೂ ಗುಣಮಟ್ಟದ ಆರೋಗ್ಯ ಸೌಲಭ್ಯ ಒದಗಿಸುವ ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ, ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಅಭಿವೃದ್ಧಿ, ರಸ್ತೆ ಸಂಪರ್ಕ, ರೈತರ ಬೆಳೆಗಳಿಗೆ ಉತ್ತಮ ಬೆಲೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಡಿ, ಸಂಧ್ಯಾ ಸುರಕ್ಷಾ, ವಿಧವೆಯರ ಹಾಗೂ ಅಂಗವಿಕಲರ ಮಾಸಾಶನ ಮೊತ್ತವನ್ನು ಹೆಚ್ಚಿಸಿದ್ದು, ಹಿರಿಯ ನಾಗರಿಕರು, ವಿಕಲಚೇತನರಲ್ಲಿ ಹೊಸ ಚೈತನ್ಯ ತುಂಬುವ ಪ್ರಯತ್ನ ಮಾಡಿದ್ದೇವೆ. ರಾಜ್ಯದಲ್ಲಿಯೇ ಉತ್ತರಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ರೂಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

 ಜಿಲ್ಲೆಗೊಂದು ಸರಕಾರಿ ಗೋಶಾಲೆ ತೆರೆಯುವ ಯೋಜನೆಯಡಿಯಲ್ಲಿ, ಜಿಲ್ಲೆಯ ಹಳಿಯಾಳ ತಾಲೂಕಿನ ಮದ್ನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದುಸುಗಿ ಗ್ರಾಮದಲ್ಲಿ ಸರ್ಕಾರಿ ಗೋಶಾಲೆ ಪ್ರಾರಂಭಿಸಲು ಸ್ಥಳ ನಿಗದಿಪಡಿಸಲಾಗಿದೆ. ಇದಕ್ಕಾಗಿ ರೂ.36.00 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ.

     ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 13673 ವಿದ್ಯಾರ್ಥಿಗಳಿಗೆ ಒಟ್ಟೂ ರೂ.3,36,01,000 (ರೂಪಾಯಿ ಮೂರು ಕೋಟಿ ಮುವತ್ತಾರು ಲಕ್ಷ ಒಂದು ಸಾವಿರ) ವಿದ್ಯಾರ್ಥಿ ವೇತನ ಡಿ.ಬಿ.ಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿರುತ್ತದೆ.

2020-21 ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಈ ವರೆಗೆ ಜಿಲ್ಲೆಗೆ ಒಟ್ಟೂ ರೂ 48.28 ಕೋಟಿಗಳ ವಿಮಾ ಪರಿಹಾರ ಹಣ ಜಮಾವಣೆ ಆಗಿದ್ದು, 2021-22ನೇ ಸಾಲಿನ ಅಡಿಕೆ ಬೆಳೆಗೆ 79394 ಹಾಗೂ ಕಾಳುಮೆಣಸು ಬೆಳೆಗೆ 3710 ಒಟ್ಟು 83104 ಪ್ರಸ್ತಾವನೆಗಳು ನೊಂದಾವಣೆಯಾಗಿರುತ್ತದೆ. 

ಜಿಲ್ಲೆಯಲ್ಲಿ “ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಈವರೆಗೆ 39704 ಗರ್ಭಿಣಿ- ಬಾಣಂತಿಯರಿಗೆ ರೂ.15.45 ಕೋಟಿಗೂ ಮೀರಿ ಮೊತ್ತವನ್ನು ಅವರುಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಕರಾವಳಿ ಮೀನುಗಾರರ ಯಾಂತ್ರಿಕೃತ ದೋಣಿಗಳಿಗೆ ಹಾಲಿ ವರ್ಷದಲ್ಲಿ ಈ ವರೆಗೆ ರೂ.10. ಕೋಟಿ ಡಿಸೇಲ್ ಖರೀದಿಯ ಮೇಲಿನ ತೆರಿಗೆ ಪಾವತಿಗಾಗಿ ಸಹಾಯಧನ ವಿತರಿಸಲಾಗಿದೆ. ಮೀನುಗಾರರ ಬೇಡಿಕೆಯಂತೆ ಆಗಸ್ಟ್-2021 ರಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ ಬದಲಿಗೆ ನೇರವಾಗಿ ದೋಣಿಗಳಿಗೆ ಕರ ರಹಿತ ಡೀಸೆಲ್ ವಿತರಣೆ ಮಾಡಲಾಗುತ್ತಿದೆ. 

ಕೋವಿಡ್ 19 ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಏಪ್ರಿಲ್ 2020 ರಿಂದ ಮಾರ್ಚ್ 2022 ರ ಮಾಹೆಯವರೆಗೆ ಪ್ರತಿ ಮಾಹೆ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳಿಗೆ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಣೆ ಮಾಡಲು ಕೇಂದ್ರ ಸರ್ಕಾರದ ಆದೇಶಿಸಿದ್ದು ಅದರನ್ವಯ ಪ್ರತಿ ಮಾಹೆ ಅಂತ್ಯೋದಯ: 16319, ಆದ್ಯತಾ (ಪಿ.ಎಚ್.ಎಚ್): 289486 ಪಡಿತರ ಚೀಟಿಗಳ 1057958 ಸದಸ್ಯರಿಗೆ ಒಟ್ಟು 5289.790 ಕ್ವಿಂ. ಅಕ್ಕಿ ವಿತರಣೆ ಮಾಡಲಾಗುತ್ತಿದೆ.  

ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಒಂದು ಬಾರಿ ಪರಿಹಾರ ಧನ ಸಹಾಯವಾಗಿ 3 ಸಾವಿರದಂತೆ 55.183 ಕಾರ್ಮಿಕರ ಖಾತೆಗೆ ಒಟ್ಟು ಮೊತ್ತ ಹದಿನಾರು ಕೋಟಿ ಐವತೈದು ಲಕ್ಷದ ನಲವತ್ತೊಂತ್ತು ಸಾವಿರ  ರೂಗಳನ್ನು ಡಿ.ಬಿ.ಟಿ ಮೂಲಕ ನೇರವಾಗಿ ಕಾರ್ಮಿಕರ ಖಾತೆಗೆ ಹಣ ಜಮಾ ಮಾಡಲಾಗಿದೆ. ಅಲ್ಲದೇ ಸಂಕಷ್ಟಕ್ಕೆ ಇಡಾದ 11 ವರ್ಗದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಒಂದು ಬಾರಿ ಪರಿಹಾರವಾಗಿ 2 ಸಾವಿರ ರೂ.ಗಳಂತೆ  ಜಿಲ್ಲೆಯಲ್ಲಿನ 44,574 ಜನ ಕಾರ್ಮಿಕರಿಗೆ ಒಟ್ಟು ಮೊತ್ತ 8,91,48,000 (ಎಂಟು ಕೋಟಿ ತೊಂಬತ್ತೊಂದು ಲಕ್ಷದ ನಲವತ್ತೆಂಟು ಸಾವಿರ) ರೂಗಳನ್ನು ಕಾರ್ಮಿಕರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿರುತ್ತದೆ.

ಕರ್ನಾಟಕ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯು ಹೆಚ್ಚು ಪ್ರವಾಹಕ್ಕೆ ಒಳಗಾದ ಜಿಲ್ಲೆಯಾಗಿದ್ದು, ಪ್ರವಾಹ ಸಂದರ್ಭದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ನಿರ್ವಹಿಸಿದ ಕಾರ್ಯವು ಶ್ಲಾಘನೀಯವಾಗಿರುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ದುರಸ್ಥಿಗೆ ಒಟ್ಟು ರೂ.200 ಕೋಟಿ ಅನುದಾನವನ್ನು ಮಂಜೂರು ಮಾಡಿರುತ್ತಾರೆ. ಸದರಿ ಅನುದಾನದಲ್ಲಿ 846 ಗ್ರಾಮೀಣ ರಸ್ತೆಗಳ ಹಾಗೂ 262 ಲೋಕೋಪಯೋಗಿ ರಸ್ತೆ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಲಾಗಿರುತ್ತದೆ. 

 ಉತ್ತರ ಕನ್ನಡ ಜಿಲ್ಲೆ ಕರ್ನಾಟಕದಲ್ಲಿಯೇ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ಜಿಲ್ಲೆಯಾಗಿದೆ. ಮಲೆನಾಡು, ಅರೆಮಲೆನಾಡು, ಕರಾವಳಿ, ಸಹ್ಯಾದ್ರಿ ಪರ್ವತ ಶ್ರೇಣಿ, ನದಿ ಜಲಪಾತಗಳು, ನಿಸರ್ಗ ರಮಣೀಯ ಸ್ಥಳಗಳನ್ನು ಹಾಗೂ ಧಾರ್ಮಿಕ ಐತಿಹಾಸಿಕ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿದ ಏಕೈಕ ಜಿಲ್ಲೆ ಎಂದರೆ ಉತ್ತರ ಕನ್ನಡ ಜಿಲ್ಲೆ. ಕನ್ನಡದ ಮೊದಲ ಸಂಸ್ಥಾನ ಕದಂಬ ಮನೆತನ ಹುಟ್ಟಿದ್ದೆ ಉತ್ತರ ಕನ್ನಡದಲ್ಲಿ. ಆ ಮೂಲಕ ಈ ಜಿಲ್ಲೆಯಿಂದ ಕನ್ನಡ ರಾಜ್ಯವನ್ನು ಹಾಗೂ ಭಾಷೆಯನ್ನು ಕಟ್ಟಿ ಬೆಳೆಸುವ ಕಾರ್ಯ ಪ್ರಾರಂಭವಾಯಿತು. ಮಯೂರವರ್ಮ, ಸೋದೆಯ ಸದಾಶಿವ ನಾಯಕ, ರಾಣೀ ಭೈರಾದೇವಿಯಂತಹ ಅನೇಕ ರಾಜ ರಾಣಿಯರು ಆಳ್ವಿಕೆಯನ್ನು ನಡೆಸಿ ನಾಡಿನ ಶ್ರೀಮಂತಿಕೆಯನ್ನು ಹೆಚ್ಚಿಸಿದರು. 
ಉತ್ತರ ಕನ್ನಡ ಜಿಲ್ಲೆ ಸ್ವಾತಂತ್ರ ಹೋರಾಟದ ತವರೂರು ಎಂದು ಹೇಳಿದರೆ ತಪ್ಪಾಗಲಾರದು. ಸಿದ್ದಾಪುರ, ಶಿರಸಿ, ಅಂಕೋಲಾ, ಕುಮಟಾ, ಹೊನ್ನಾವರ ಸ್ವಾತಂತ್ರ ಹೋರಾಟದ ಕೇಂದ್ರಸ್ಥಳವಾಗಿದ್ದವು. ಸಿದ್ಧಾಪುರ ತಾಲೂಕಿನ ಬಹುತೇಕ ಕುಟುಂಬಗಳು ಸ್ವಾತಂತ್ರ ಹೋರಾಟದಲ್ಲಿ ಭಾಗವಹಿಸಿ ತಮ್ಮ ಬಲಿದಾನವನ್ನು ನೀಡಿದ್ದಾರೆ. ಕರ್ನಾಟಕದ ಬಾರ್ಡೋಲಿ ಎಂದು ಪ್ರಸಿದ್ಧವಾಗಿರುವ ಅಂಕೋಲಾ ತಾಲೂಕಿನಲ್ಲಿ ಉಪ್ಪಿನ ಸತ್ಯಾಗ್ರಹ ನಡೆಸಿ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿರುವುದನ್ನು ನಾವು ಹೆಮ್ಮೆಯಿಂದ ಗೌರವಿಸಬೇಕಾಗುತ್ತದೆ. 

‘ಎಲ್ಲಿ ಮನೆಯೊಗ್ಗಟ್ಟು, ಅಲ್ಲಿ ಸಂಸಾರ ನೆಲೆಗಟ್ಟು’ ಎಂದು ಹೇಳಿದ ಗುರುದೇವ ರವೀಂದ್ರನಾಥ ಠ್ಯಾಗೋರರ ಮಾತನ್ನು ಅರ್ಥೈಸಿಕೊಂಡು, ಮೇಲು, ಕೀಳು, ಬಡವ, ಬಲ್ಲಿದನೆಂಬ ಭೇದ ಮರೆತು ಸಶಕ್ತ ರಾಷ್ಟ್ರ ನಿರ್ಮಾಣ ಮಾಡೋಣ. ಸ್ನೇಹ, ಪ್ರೀತಿ, ಸೋದರ ಭಾವದ ಸೆಲೆ ನಮ್ಮ ಜೀವಾಳವಾಗಲಿ ಎಂದು ಸಚಿವರು ಹಾರೈಸಿದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...