ಯುವಕರು ಕೃಷಿಯತ್ತ ಒಲವು ತೋರಲಿ: ಪ್ರಭು ಚವ್ಹಾಣ್

Source: SO News | By Laxmi Tanaya | Published on 4th September 2021, 8:34 PM | State News | Don't Miss |

ಬೀದರ : ಯುವಜನಾಂಗ ಕೃಷಿ ಕ್ಷೇತ್ರದ ಕಡೆಗೆ ಒಲವು ತೋರಿಸುವ ನಿಟ್ಟಿನಲ್ಲಿ ಯೋಜನೆಯೊಂದನ್ನು ರೂಪಿಸಬೇಕಿದೆ ಎಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಕಛೇರಿ ಸಂಭಾಣಗಣದಲ್ಲಿ ಶುಕ್ರವಾರ ಕೇಂದ್ರ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಯಸ್ಕ ನಾಗರಿಕರೇ ಕಾಣಿಸುತ್ತಿದ್ದು, ಯುವಕರು ಕೂಡ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಿದೆ. ಕೃಷಿ ಕ್ಷೇತ್ರದಲ್ಲಿ ಸುಧಾರಣೆಯಾಗಬೇಕೆಂದರೆ ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಳ್ಳಬೇಕು. ಆಧುನಿಕ ಉಪಕರಣಗಳನ್ನು ಸಮರ್ಪಕವಾಗಿ ಬಳಕೆಯಾಗಬೇಕು. ಕೃಷಿ ಕ್ಷೇತ್ರವು ಹಿಂದಿನಂತಿರದೇ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ನಾವ್ಯಾರಿಗೂ ಕಮ್ಮಿಯಿಲ್ಲ ಎನ್ನುವಂತೆ ಪ್ರಗತಿ ಸಾಧಿಸಿದ ರೈತರು ನಮ್ಮೆದುರಿಗೆ ಇದ್ದಾರೆ. ಈ ಬಗ್ಗೆ ಯುವಜನತೆಗೆ ಮನವರಿಕೆ ಮಾಡಿಕೊಟ್ಟು ಯುವಕರು ಕೃಷಿ ಕ್ಷೇತ್ರಕ್ಕೆ ಬರುವಂತೆ ಪ್ರೇರಣೆ ನೀಡುವಂತಹ ಕೆಲಸ ಆಗಬೇಕಿದೆ ಎಂದು ಸಚಿವರು ಪ್ರತಿಪಾದಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...