ಮಕ್ಕಳನ್ನು ರಕ್ಷಿಸುವ ಮೂಲಕ ಉತ್ತಮ ಸಮಾಜವನ್ನು ಕಟ್ಟೋಣ: ಜಿಲ್ಲಾಧಿಕಾರಿ

Source: so news | Published on 14th November 2019, 11:42 PM | State News | Don't Miss |

ಮಂಡ್ಯ :-ನಮ್ಮ ಜೀವನದ ವಿವಿಧ ಹಂತಗಳಲ್ಲಿ ಬಾಲ್ಯ ಜೀವನ ಅತ್ಯುತ್ತಮವಾದ ಘಟ್ಟ. ಯಾವುದೇ ಒತ್ತಡ, ಆತಂಕ ಹಾಗೂ ಭಯವಿಲ್ಲದೆ ಮುಕ್ತ ಆಲೋಚನೆ ಮಾಡುವುದರ ಮೂಲಕ ಪ್ರೀತಿ, ಸಹನೆ, ವಾತ್ಸಲ್ಯ ಹಾಗೂ ಉತ್ತಮ ಸಹಪಾಠಿಗಳನ್ನು ಪಡೆಯುವ ಘಟ್ಟವೇ ಈ ಬಾಲ್ಯ. ಇಂತಹ ವ್ಯವಸ್ಥೆ ಪ್ರತಿ ಮಗುವಿಗೂ ಸಿಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ. ವಿ ವೆಂಕಟೇಶ್ ಅವರು ಹೇಳಿದರು.
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊಸಹಳ್ಳಿಯಲ್ಲಿ ಮಕ್ಕಳ ಸಹಾಯವಾಣಿ 1098 (ಛಿhiಟಜಟiಟಿe), ನೊಡೆಲ್-ಬಡ್ರ್ಸ್ ಸಂಸ್ಥೆ ಮತ್ತು ಕೊಲಾಬ್-ವಿಕಸನ ಸಂಸ್ಥೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆ, ಹೊಸಹಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಫೇವಾರ್ಡ್ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ಸಹಾಯವಾಣಿ ಸ್ನೇಹಿ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಮಕ್ಕಳು ಒತ್ತಡ, ಶೋಷಣೆ ಮತ್ತು ದೌರ್ಜನ್ಯ ಮುಕ್ತ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಸಮಾಜ ಹಾಗೂ ಸುತ್ತಮುತ್ತಲಿನ ಜನರು ಸ್ಪಂದಿಸಬೇಕು. ಒಂದು ಕಡೆ ಹಲವಾರು ಮಕ್ಕಳು ಸಂತೋಷವಾಗಿದ್ದರೆ, ಇನ್ನೊಂದೆಡೆ ದುಃಖವನ್ನು ಕೂಡಿದ್ದು, ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಅಷ್ಟೇ ಅಲ್ಲದೇ ಮಕ್ಕಳು ದೌರ್ಜನ್ಯಕ್ಕೂ ಕೂಡ ಒಳಗಾಗುತ್ತಿದ್ದಾರೆ. ಇದನ್ನು ಅರಿತ ಸರ್ಕಾರ ಮಕ್ಕಳ ಅಭಿವೃದ್ಧಿಗಾಗಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಪದ್ಧತಿ, 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಅನ್ನ ದಾಸೋಹದಂತಹ ಹಲವಾರು ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಪ್ರತಿ ಮಗು ದಿವ್ಯ ಚೇತನವಾಗಿ ದೇಶದ ಬಲಿಷ್ಠ ಪ್ರಜೆಯಾಗಬೇಕು ಎಂದು ಹೇಳಿದೆ ಎಂದು ತಿಳಿಸಿದರು.
ಪ್ರತಿಯೊಂದು ಮಗುವಿಗೂ ಸಹಾಯವಾಗಲಿ ಎಂದು 1098 ಮಕ್ಕಳ ಸಹಾಯವಾಣಿಯನ್ನು ತೆರೆಯಲಾಗಿದ್ದು, ಎಲ್ಲರು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನವೆಂಬರ್ ತಿಂಗಳು ಮಕ್ಕಳಿಗೆ ಸೀಮಿತವಾಗಿದ್ದು, ನವೆಂಬರ್ 14 ಮಕ್ಕಳ ದಿನಾಚರಣೆ, ನವೆಂಬರ್ 20 ಮಕ್ಕಳ ಹಕ್ಕುಗಳ ದಿನಾಚರಣೆ, ನವೆಂಬರ್ 25 ಹೆಣ್ಣು ಮಕ್ಕಳಿಗೆ ದೌರ್ಜನ್ಯ ರಹಿತ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುವಂತಹ ದಿವಸವನ್ನಾಗಿ ಹಾಗೂ ಜಿಲ್ಲೆಯಾದ್ಯಂತ ಮಕ್ಕಳ ಗ್ರಾಮ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಒಟ್ಟಾರೆ ಈ ಮಾಸದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸಗಳು ನಡೆಯುತ್ತಿದ್ದು, ಈ ಜಾಗೃತಿ ಪ್ರತಿ ಮನೆ_ಮನಗಳಿಗೂ ತಲುಪಿದಾಗ ಮಾತ್ರ ದೌರ್ಜನ್ಯ ತಡೆಗಟ್ಟಲು ಸಾಧ್ಯ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ವಿ.ಜೆ.ಶೋಭರಾಣಿ ಅವರು ಸಹಿ ಸಂಗ್ರಹಕ್ಕೆ ಚಾಲನೆ ನೀಡಿ ಮಾತಾನಾಡಿ ಮಕ್ಕಳು ಯಾವುದೇ ಸಮಸ್ಯೆಗೆ ಒಳಗಾದಾಗ 1098 ಗೆ ಕರೆ ಮಾಡಬಹುದು. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಇದೇ ದೂರವಾಣಿ ಸಂಖ್ಯೆಗೆ ಕರೆ ಮಾಡಿ. ಜೀವನದಲ್ಲಿ ಸಾಧನೆ ಮಾಡಬೇಕೆಂಬ ಆಸೆ ಇದ್ದರೆ ಸಾಲದು, ಅದರ ಜತಗೆ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಸರ್ಕಾರಿ ಶಾಲೆಯಲ್ಲಿ ಓದಿದವರೇ ಇಂದು ದೊಡ್ಡ ದೊಡ್ಡ ಅಧಿಕಾರಿಗಳಾಗಿದ್ದಾರೆ. ಅವರಂತೆ ನೀವು ಸಹ ಆಗಬೇಕು ಎಂದು ಹಾರೈಸಿದರು.
ಇದೇ ವೇಳೆ ಬಾಲ್ಯ ವಿವಾಹ ನಿಷೇಧ ಕುರಿತ ಕರ ಪತ್ರ, ಸಹಿ ಸಂಗ್ರಹ ಹಾಗೂ 1098 ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಹೆಚ್.ಎಸ್.ಮಂಜುನಾಥ್ ಅವರು ವಹಿಸಿದ್ದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಸ್.ರಾಜಮೂರ್ತಿ, ಮಂಡ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ರಘುನಂದನ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಕಾಂತ, ಹೊಸಹಳ್ಳಿ ಶಿಕ್ಷಣ ಆಸಕ್ತರಾದ ಶೇಖರ್, ಮಕ್ಕಳ ಸಹಾಯವಾಣಿ ನೊಡೆಲ್‍ನ ನಿರ್ದೇಶಕರಾದ ವೆಂಕಟೇಶ್, ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಮಹೇಶ್, ರಾಜಮಣ್ಣಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...