ಬೆಂಗಳೂರಲ್ಲಿ ಇಂದು ಸಂಜೆಯಿಂದಲೇ ಮತ್ತೆ ಲಾಕ್‌ಡೌನ್..!

Source: UNI | Published on 22nd June 2020, 3:46 PM | State News | Don't Miss |

ಬೆಂಗಳೂರು: ನಗರದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಲಾಕ್‍ಡೌನ್ ಬಿಗಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆ ಇದೆ. ಮುಂಜಾಗ್ರತೆ ತೆಗೆದುಕೊಳ್ಳಲೇಬೇಕೆಂದು ಅಧಿಕಾರಿಗಳು ಸಲಹೆ ನೀಡಿದ್ದು, ಜಯನಗರ, ಬಸವನಗುಡಿ, ಶಿವಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ರಾಜಾಜಿನಗರ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಲ್ಲಿ ಲಾಕ್‍ಡೌನ್ ಬಿಗಿಗೊಳಿಸಲು ನಿರ್ಧರಿಸಲಾಗಿದೆ. ಚಾಮರಾಜಪೇಟೆ, ಚಿಕ್ಕಪೇಟೆ, ಕೆ. ಆರ್. ಮಾರ್ಕೆಟ್ ಮತ್ತು ಕಲಾಸಿ ಪಾಳ್ಯ ಪ್ರದೇಶದಲ್ಲಿ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ ಎಂಬ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಿದೆ. 
ಈ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ 10 ಗಂಟೆವರೆಗೆ ಹಾಲು, ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಖರೀದಿಗಾಗಿ ಲಾಕ್‍ಡೌನ್‍ನ್ನು ಸಡಿಲಗೊಳಿಸಲಾಗುತ್ತದೆ. ಉಳಿದಂತೆ ಬಿಗಿಯಾದ ಲಾಕ್‍ಡೌನ್ ಜಾರಿಗೊಳಿಸಲಾಗುತ್ತದೆ. ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ ಬಳಿಕ ಕಂದಾಯ ಸಚಿವ ಅಶೋಕ್ ಈ ಮಾಹಿತಿ  ನೀಡಿದ್ದಾರೆ. ಸಚಿವರಾದ ಸುಧಾಕರ್ ಮತ್ತು ಶ್ರೀರಾಮುಲು ಈ ಸಭೆಗೆ ಗೈರು ಹಾಜರಾಗಿದ್ದರು 
ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಸೋಂಕು ನಿಯಂತ್ರಣ ಮೀರಿ ಹೆಚ್ಚಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ್ದು, ಮಾಸ್ಕ್ ಧರಿಸದೆ ಓಡಾಡುವವರನ್ನು, ಕಂಡಕಂಡಲ್ಲಿ ಉಗುಳುವವರನ್ನು, ಸೋಂಕು ನಿಯಂತ್ರಣಕ್ಕೆ ಅಗತ್ಯವಾದ ಮುನ್ನೆಚ್ಚರಿಕೆ ಕ್ರಮ ಪಾಲಿಸದೆ ಬೇಕಾಬಿಟ್ಟಿ ವರ್ತಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಅಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೊರ ರಾಜ್ಯಗಳಿಂದ ಆಗಮಿಸುವವರನ್ನು 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿಡಬೇಕು ಎಂದು ಸೂಚಿಸಿದ್ದಾರೆ. ಜನಸಂಚಾರ ಹೆಚ್ಚಿರುವ ಮತ್ತು ಸೋಂಕಿನ ಪ್ರಮಾಣ ತೀವ್ರವಾಗಿರುವ ಮೆಜೆಸ್ಟಿಕ್ ಮತ್ತು ಗಾಂನಗರ ಪ್ರದೇಶಗಳಲ್ಲಿ ಬಿಗಿಯಾದ ಕಾನೂನು ಜಾರಿಗೊಳಿಸುವಂತೆ ಲಾಕ್‍ಡೌನ್ ನಿಯಮಗಳನ್ನು ಪಾಲಿಸಲು ತಾಕೀತು ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಪಾದರಾಯನಪುರದಲ್ಲಿ 2080 ಮಂದಿ ಗರ್ಭಿಣಿಯರಿದ್ದು ಅವರನ್ನು ಕೂಡಲೇ ಕ್ವಾರಂಟೈನ್‍ಗೆ ಒಳಪಡಿಸಬೇಕು, ಬಾಣಂತಿಯರನ್ನೂ ಸುರಕ್ಷಿತ ದೃಷ್ಟಿಯಿಂದ ಕ್ವಾರಂಟೈನ್‍ಗೊಳಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...