ಉತ್ತರಕನ್ನಡ ಜಿಲ್ಲೆಯಲ್ಲಿ ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ. ಸೋಮವಾರದಿಂದ ಗುರುವಾರದವರೆಗೆ ಬೆಳಿಗ್ಗೆ 8ರಿಂದ 12ರವರೆಗೆ ಸಡಿಲಿಕೆ.

Source: SO News | By Laxmi Tanaya | Published on 6th June 2021, 10:05 PM | Coastal News |

ಕಾರವಾರ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೂನ್  07 ರ ಬೆಳಿಗ್ಗೆ ಆರು ಗಂಟೆಯಿಂದ 14 ರವರೆಗೆ  ಬೆಳಿಗ್ಗೆ 6-00ರವರೆಗೆ ಲಾಕ್ ಡೌನ್ ಆದೇಶ ಮಾರ್ಪಡಿಸಲಾಗಿದೆ. ಆದರೆ ಕೆಲವೊಂದು ಸಡಿಲಿಕೆ ನೀಡಿ ಆದೇಶಿಸಲಾಗಿದೆ‌

 ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದನ್ನು ನಿಷೇಧಿಸಿದೆ.  ಜಿಲ್ಲೆಯಲ್ಲಿ ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರ ಮಾತ್ರ ಬೆಳಿಗ್ಗೆ 8-00 ಗಂಟೆಯಿಂದ 12-00 ಗಂಟೆಯವರೆಗೆ ದಿನನಿತ್ಯದ ಅಗತ್ಯ ವಸ್ತುಗಳು, ಹಾಲು, ತರಕಾರಿ, ದಿನಸಿ, ಛತ್ರಿ, ರೇನ್ ಕೋಟ್ ಮುಂತಾದ ಮಳೆಗಾಲಕ್ಕೆ ಅವಶ್ಯವಿರುವ ವಸ್ತುಗಳ ಮಾರಾಟ ಮತ್ತು ಎಲ್ಲಾ ರೀತಿಯ ಅಧೀಕೃತ ಸನ್ನದುಗಳಲ್ಲಿ ಮದ್ಯ/ಬೀಯರ್ ಮತ್ತು ವೈನ್ ಮಾರಾಟಕ್ಕೆ ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ ಅವಕಾಶವಿರುತ್ತದೆ.

 ಮಾರಾಟದ ಸಮಯದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮುಂತಾದ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದುನ್ನು ಸ್ಥಳೀಯ ಆಡಳಿತ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ‌ಖಚಿತಪಡಿಸಿಕೊಳ್ಳತಕ್ಕದ್ದು ಅವಧಿಯಲ್ಲಿ ನಿರ್ಬಂಧಿತ ಅವಕಾಶವಿರುತ್ತದೆ.

ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್ ಡೌನ್ (ಔಷಧ ಮತ್ತು ಹಾಲು ಮಾರಾಟವನ್ನು,  ಎಲ್ಲಾ ಖಾಸಗಿ ವಾಹನಗಳ ಸಂಚಾರವನ್ನು ( ವೈದ್ಯಕೀಯ ಸೇವೆ, ಅತೀ ತುರ್ತು ಸೇವೆಗಳನ್ನು

ಹೊರತುಪಡಿಸಿ) ಇರುತ್ತದೆ.‌  ಸರಕಾರಿ ನೌಕರರನ್ನು ಅಧೀಕೃತ ಗುರುತಿನ ಚೀಟಿ ಇದ್ದಲ್ಲಿ ಮಾತ್ರ ಅವಕಾಶವಿದೆ. ತಹಶೀಲ್ದಾರರು ಆಯಾ ತಾಲೂಕಾ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಕಂಡುಬಂದಲ್ಲಿ ಅಂತಹ ಪ್ರದೇಶಗಳನ್ನು ವಿಶೇಷ ಕಂಟೈನ್ ಮೆಂಟ್ ವಲಯವನ್ನಾಗಿ ಘೋಷಣೆ ಮಾಡಿ ಸಂಪೂರ್ಣ ಲಾಕ್ ಡೌನ ಮಾಡುವುದು. ಸದ್ರಿ ಪ್ರದೇಶಗಳಲ್ಲಿ ದಿನನಿತ್ಯದ ಅಗತ್ಯ ವಸ್ತುಗಳು, ತರಕಾರಿ ಹಾಗೂ ದಿನಸಿ ಯನ್ನು ಮನೆ ಮನೆಗೆ ಮಾರಾಟ ಮಾಡಲು ಸ್ಥಳೀಯ ಆಡಳಿತಗಳು ಸೂಕ್ತ ವ್ಯವಸ್ಥೆ ಮಾಡಬೇಕು.

ಈ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಜಿಲ್ಲೆಯ ಸಾರ್ವಜನಿಕರು ಕೋವಿಡ್ ಸಮುಚಿತ ವರ್ತನೆ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ) ಯನ್ನು ಪಾಲಿಸುವುದರೊಂದಿಗೆ ಕೋವಿಡ್ ನಿಯಂತ್ರಣ ಮಾಡುವಲ್ಲಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ವಿನಂತಿಸಿದ್ದಾರೆ. 

ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ಮಾಡಿಸಿಕೊಳ್ಳಬೇಕು. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ವಿಭಾಗ 51 ರಿಂದ 50 ರನ್ವಯ, ಭಾರತೀಯ ದಂಡ ಸಂಹಿತೆ ಸಕ್ತನ್ 188 ರನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆ 2020 ರ ವಿಭಾಗ 4, 5 ಮತ್ತು 10 ರಂತೆ ಕ್ರಮಗಳನ್ನು ಜರುಗಿಸಲಾಗುವುದು.‌ಈ ಆದೇಶದ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಪೋಲಿಸ್ ಅಧೀಕ್ಷಕರು, ಉತ್ತರ ಕನ್ನಡ, ಕಾರವಾರ ರವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಬದ್ಧರಾಗಿರುತ್ತಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...