ಲೋಕಸಭಾ ಚುನಾವಣೆ:ಹಾಸನ ಕ್ಷೇತ್ರದ ಅಂತಿಮ ಕಣದಲ್ಲಿ 6 ಅಭ್ಯರ್ಥಿಗಳು

Source: so news | By MV Bhatkal | Published on 30th March 2019, 1:04 AM | State News | Don't Miss |

 

ಹಾಸನ:ಲೋಕಸಭಾ ಚುನಾವಣೆ ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾದ ಇಂದು ಭಾರತೀಯ ಡಾ|| ಬಿ.ಆರ್. ಅಂಬೇಡ್ಕರ್ ಜನತಾ ಪಕ್ಷದ ಅಭ್ಯರ್ಥಿ ಹೆಚ್.ಪಿ. ಮಂಜುನಾಥ್ ತಮ್ಮ ನಾಮಪತ್ರ ಹಿಂಪಡೆದಿದ್ದು 6 ಮಂದಿ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ. 
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರು ಮಾ.29 ರಂದು ಮಧ್ಯಾಹ್ನ 3 ಗಂಟೆ ನಂತರ ವೀಕ್ಷಕರಾದ ಮಂಜಿತ್ ಸಿಂಗ್ ಬ್ರಾರ್ ಹಾಗೂ ಶಶಿಭೂಷಣ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಅಭ್ಯರ್ಥಿಗಳು ಮತ್ತು ಅವರ ಪ್ರತಿನಿಧಿಗಳ ಸಭೆ ನಡೆಸಿ ಅಂತಿಮ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಿದರು. 
ಮಾನ್ಯತೆ ಪಡೆದ ಪಕ್ಷಗಳ ಅಭ್ಯರ್ಥಿಗಳಿಗೆ ಆಯಾಯ ಪಕ್ಷದ ಚಿಹ್ನೆಗಳು, ಲಭ್ಯವಿದ್ದು ಉಳಿದವರಿಗೆ ಅವರ ಆಯ್ಕೆಗಳಂತೆ ಚಿಹ್ನೆ ನೀಡಲಾಗಿದೆ. ಅದರಲ್ಲಿ ಜಾತ್ಯಾತೀತ ಜನತಾದಳದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ತೆನೆ ಹೊತ್ತ ಮಹಿಳೆ, ಭಾರತೀಯ ಜನತಾಪಕ್ಷದ ಅಭ್ಯರ್ಥಿ ಎ. ಮಂಜು ಅವರಿಗೆ ಕಮಲ, ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ವಿನೋದ್ ರಾಜ್‍ಗೆ ಆನೆ ಚಿಹ್ನೆ ದೊರೆತಿವೆ. ಅದೇ ರೀತಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಚಂದ್ರೇಗೌಡರಿಗೆ ಚುನಾವಣಾ ಆಯೋಗದ ರಾಜಾದ್ಯಂತ ನಿಗದಿ ಪಡಿಸಿರುವ ಆಟೋ ಚಿಹ್ನೆ ದೊರೆತಿದೆ.
ಪಕ್ಷೇತರ ಅಭ್ಯರ್ಥಿಗಳಾದ ಮಹೇಶ್ ಅವರಿಗೆ ರೋಡ್‍ರೋಲರ್ ಚಿಹ್ನೆಯನ್ನು ಮತ್ತು ಆರ್.ಜಿ. ಸತೀಶ್ ಅವರಿಗೆ ಡಿಶ್ ಆ್ಯಂಟನಾ ಮತ್ತು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಹಂಚಿಕೆ ಮಾಡಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಸಿದ್ದವಾಗಿದ್ದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರು ಅಭ್ಯರ್ಥಿಗಳಿಗೆ ಹಾಗೂ ಅವರ ಏಜೆಂಟ್‍ಗಳೀಗೆ ಹಸ್ತಾಂತರಿಸಿದರು.
ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ಈ ಅಂತಿಮ ಮತದಾರರ ಪಟ್ಟಿ ಮತ್ತು ಅಭ್ಯರ್ಥಿಗಳ ಗುರುತಿನ ಚೀಟಿಗಳನ್ನು ವಿವರಣೆ ಮಾಡಿದ ಅವರು ಬೂತ್‍ವಾರು ಏಜೆಂಟರ್‍ಗಳಿಗೆ ಕೇವಲ ಈ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಮಾತ್ರ ನೀಡಬೇಕು. ಹಳೆಯ ಪಟ್ಟಿಯನ್ನು ಬಳಸಿದಲ್ಲಿ ಮತದಾನದ ದಿನ ಅನಗತ್ಯ ಗೊಂದಲಗಳು ಸೃಷ್ಠಿಯಾಗಲಿದ್ದು ಈ ಬಗ್ಗೆ ಅಭ್ಯರ್ಥಿಗಳು ಗಮನ ಹರಿಸಿ ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ತಿಳಿಸಿದರು.
ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಚುನಾವಣಾ ತಹಶೀಲ್ದಾರರುಗಳಾದ ಶಿವ ಶಂಕರಪ್ಪ, ನಾಗಭೂಷಣ್, ಚುನಾವಣಾ ಶಿರಸ್ತೆದಾರ್ ಸಿದ್ದರಾಜು ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...