ಲೋಕಸಭಾ ಚುನಾವಣೆ:ವ್ಯವಸ್ಥಿತಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

Source: so news | By MV Bhatkal | Published on 20th March 2019, 11:53 PM | State News | Don't Miss |

 

ಹಾಸನ : ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಜಿಲ್ಲಾಧಿಖಾರಿ ಕಚೇರಿಯಲ್ಲಿಂದು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಇತರ ನೋಡಲ್ ಅಧಿಕಾರಿಗಳ ಸಭೆ ನಡೆಸಿ ಮುಕ್ತ ನ್ಯಾಯ ಸಮ್ಮತ ಸಲಹೆ ಸೂಚನೆಗಳನ್ನು ನೀಡಿದರು.
ಬಾಕಿ ಉಳಿದಿರುವ ನಮೂನೆ 6,7,8, 8ಂ ಅರ್ಜಿಗಳನ್ನು ಇಂದೇ ವಿಲೇವಾರಿ ಮಾಡಿ ವರದಿ ಮಾಡಬೇಕು. ಇದರಲ್ಲಿ ಸಹಾಯಕ ಚುನಾವಣಾಧಿಕಾರಿಗಳದೇ ಸಂಪೂರ್ಣ ಜವಾಬ್ದಾರಿಯಾಗಿದ್ದು ಅಗತ್ಯ ಕ್ರಮವಹಿಸಬೇಕು ಎಂದು ಅವರು ಹೇಳಿದರು.
ಎಲ್ಲಾ ಮತಗಟ್ಟೆಗಳನ್ನು ಮತ್ತೊಮ್ಮೆ ಸೂಕ್ಷ್ಮವಾಗಿ ಪರಿಶೀಲಿಸಿ ಗಾಳಿ, ಬೆಳಕು ರ್ಯಾಂಪ್, ದೂರವಾಣಿ ಸಂಪರ್ಕ ಇತರ ಮೂಲಭೂತ ಸೌಕರ್ಯಗಳು ಇರುವುದನ್ನು ಖಾತರಿ ಪಡಿಸಿಕೊಳ್ಳಿ ಎಂದು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಸೂಚಿಸಿದರು.
ಮತಗಟ್ಟೆಗಳಾಗಿರುವ ಶಾಲಾ ಕೊಠಡಿಗಳ ದುರಸ್ಥಿಗೆ ಈಗಾಗಲೇ ಹಣ ಬಿಡುಗಡೆಯಾಗಿದ್ದು ಅದನ್ನು ಕೂಡಲೆ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗಕ್ಕೆ ವರ್ಗಾಯಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದ ಅವರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅವರ ಅನುದಾನದಲ್ಲೇ ದುರಸ್ಥಿ ಪಡಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದರು. 
ಪ್ರತಿ ಚುನಾವಣೆಗಳು ಹೊಸದನ್ನು ಕಲಿಸುತ್ತವೆ. ಪ್ರತಿಯೊಬ್ಬರು ಜಾಗೃತರಾಗಿ, ವಿವೇಕ ಯುತವಾಗಿ ಕಾರ್ಯನಿರ್ವಹಿಸಿ, ವೀಕ್ಷಕರೊಂದಿಗೆ ಸಮನ್ವಯ ಸಾಧಿಸಿ ಸೂಕ್ತ ಮಾಹಿತಿ ನೀಡುತ್ತಾ ಇತರ ಕೆಲಸವನ್ನು ನಿಬಾಯಿಸಿ ಎಂದು ಸಹಾಯಕ ಚುನಾವಣಾಧಿಕಾರಿಯವರಿಗೆ ತಿಳಿಸಿದರು.
ಇದೇ ವೇಳೆ ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಅವರು ಅಂಚೆ ಮತ ಪತ್ರಗಳ ವಿತರಣೆ, ಕರ್ತವ್ಯ ಪತ್ರಗಳ ವಿತರಣೆ, ಕಡೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಾಸನ ಲೋಕಸಭಾ ಕ್ಷೇತ್ರ ಬರುವುದರಿಂದ ಅಲ್ಲಿ ಚುನಾವಣಾ ಸಿಬ್ಬಂದಿಗಳ ನೇಮಕಾತಿ ಅಲ್ಲಿಂದ ಬೇರೆ ಕಡೆ ಕರ್ತವ್ಯಕ್ಕೆ ತೆರಳುವವರಿಗೆ ಅಂಚೆ ಮತಪತ್ರ ನೀಡುವ ಪ್ರಕ್ರಿಯೆ ಕುರಿತು ವಿವರಿಸಿದರು.
ಉಪವಿಭಾಗಾಧಿಕಾರಿ ಡಾ|| ಹೆಚ್.ಎಲ್. ನಾಗರಾಜ್ ಅವರು ಮಸ್ಟರಿಂಗ್ ಡಿ ಮಸ್ಟರಿಂಗ್ ಪ್ರಕ್ರಿಯೆಗಳ ಬಗ್ಗೆ ವಿವರಿಸಿದರು. ಪ್ರತಿ ಮಸ್ಟರಿಂಗ್ ಕೇಂದ್ರದ ಮುಂದೆ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಅಲ್ಲಿಯೇ ಇ.ಡಿ.ಸಿ ಮತ್ತು ಅಂಚೆ ಮತ ಪತ್ರಗಳನ್ನು ವಿತರಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಚುನಾವಣಾ ಕರ್ತವ್ಯದಲ್ಲಿ ತೊಡಗುವವರಿಗೆ ಸೂಕ್ತ ತರಬೇತಿ ಅಗತ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರು ಮಸ್ಟರಿಂಗ್ ಕಾರ್ಯ ಅತ್ಯಂತ ವ್ಯವಸ್ಥಿತವಾಗಿ ನಡೆಯಬೇಕು ಚುನಾವಣಾ ಕರ್ತವ್ಯದಲ್ಲಿ ತೊಡಗುವವರಿಗೆ ತಿಂಡಿ, ಊಟೋಪಚಾರ ಅಚ್ಚು ಕಟ್ಟಾಗಿರಬೇಕು. ಯಾವುದೇ ಗೊಂದಲಗಳು ಉಂಟಾಗಬಾರದು. ವಿದ್ಯುನ್ಮಾನ ಮತಯಂತ್ರ, ವಿ.ವಿ.ಪ್ಯಾಟ್ ಸುರಕ್ಷತೆ, ಅಣಕು ಮತದಾನ, ವಿದ್ಯುನ್ಮಾನ ಮತಯಂತ್ರಗಳ ಸಮಸ್ಯೆ ಕಂಡು ಬಂದಲ್ಲಿ ಅದನ್ನು ತಕ್ಷಣ ಬದಲಾಯಿಸಲು ಮಾಡಿಕೊಳ್ಳಬೇಕಾದ ವ್ಯವಸ್ಥೆ ಬಗ್ಗೆ ವಿವರಿಸಿದರು.
1,61,01,894 ರೂ ಅಕ್ರಮ ಮಧ್ಯ ವಶ: ಅಬಕಾರಿ ಉಪ ಆಯುಕ್ತರಾದ ಗೋಪಾಲಕೃಷ್ಣ ಗೌಡ ಅವರು ಅಬಕಾರಿ ದಾಳಿಗಳ ಬಗ್ಗೆ ಮಾಹಿತಿ ನೀಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಅಬಕಾರಿ ಅಕ್ರಮಗಳ ತಪಾಸಣೆಯನ್ನು ಚುರುಕುಗೊಳಿಸಲಾಗಿದೆ. ಮಾ 10 ರಿಂದ ಇವರೆಗೆ 209 ರೈಡ್‍ಗಳನ್ನು ನಡೆಸಲಾಗಿದ್ದ 1,61,01,894 ರೂ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಾ.10 ರಿಂದ ಈವರೆಗೆ 70 ಮಂದಿ ವಿರುದ್ದ ಅಬಕಾರಿ ಹೀನ ಅಪರಾಧ ಕೃತ್ಯಗಳ ಪ್ರಕರಣ ದಾಖಲಿಸಲಾಗಿದೆ. 26,159.75 ಲೀಟರ್ ಅಕ್ರಮ ಮಧ್ಯ 872.95 ಲೀಟರ್ ಬಿಯರ್, 84 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಳ್ಳಲಾಗಿದೆ ಎಂದು ಗೋಪಾಲಕೃಷ್ಣಗೌಡ ವಿವರಿಸಿದರು.
1 ಪ್ರಕರಣದಲ್ಲಿ ಮಧ್ಯ ಮಾರಾಟ ಲೈಸೆನ್ ಅಮಾನತ್ತು ಪಡಿಸಲಾಗಿದೆ 1 ನಾಲ್ಕು ಚಕ್ರದ ವಾಹನ, 3 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ಪ್ರಿಯಾಂಗ, ಉಪವಿಭಾಗಾಧಿಕಾರಿ ಡಾ. ಕವಿತಾ ರಾಜಾರಾಂ ಹಾಗೂ ವಿವಿಧ ವಿಧಾನ ಸಭಾ ಕ್ಷೇತ್ರದ ಎ.ಆರ್.ಓಗಳು, ಲೆಕ್ಕ ಪತ್ರ ತಂಡದ ಮುಖ್ಯಸ್ಥರು ಹಾಜರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...