ಲೋಕಸಭಾ ಚುನಾವಣೆ: ಆಯುಧ ಠೇವಣಿ ಮಾಡಲು ಸೂಚನೆ

Source: so news | By MV Bhatkal | Published on 13th March 2019, 1:25 AM | State News | Don't Miss |

ಕಲಬುರಗಿ:ಲೋಕಸಭಾ ಚುನಾವಣೆ-2019 ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಾದ್ಯಂತ ಹೊಂದಿರುವ ಆಯುಧ ಲೈಸೆನ್ಸ್‍ದಾರರ ಆಯುಧ (ಫೈರ್ ಆಮ್ರ್ಸ್)ಗಳನ್ನು (ರಾಷ್ಟ್ರೀಕೃತ ಬ್ಯಾಂಕ್ ಮತ್ತು ರಿಸರ್ವ್ ಬ್ಯಾಂಕ ಅವರಿಂದ ಅನುಮೋದಿತ ಶೆಡ್ಯೂಲ್ ಬ್ಯಾಂಕುಗಳ ಸೆಕ್ಯೂರಿಟಿ ಗಾರ್ಡಗಳ ಆಯುಧಗಳನ್ನು ಹೊರತುಪಡಿಸಿ) ತಕ್ಷಣದಿಂದಲೇ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾ ದಂಡಾಧಿಕಾರಿ ಆರ್.ವೆಂಕಟೇಶ ಕುಮಾರ ಸೂಚಿಸಿ ಆದೇಶ ಹೊರಡಿಸಿದ್ದಾರೆ.
ಆಯುಧ ಕಾಯ್ದೆ 1959ರ ಕಲಂ 24ಎ(1)ರನ್ವಯ ಹೊರಡಿಸಿರುವ ಈ ಆದೇಶದಲ್ಲಿ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಅಂದರೆ 2019ರ ಮೇ 27 ರವರೆಗೆ ಯಾವುದೇ ಆಯುಧ ಲೈಸೆನ್ಸ್‍ದಾರರು ತಮ್ಮ ಆಯುಧವನ್ನು ಚುನಾವಣೆ ಸ್ಥಳ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೊತ್ತು ಒಯ್ಯುವುದನ್ನು ಮತ್ತು ಪ್ರದರ್ಶನ ಮಾಡುವುದನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. 
ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ:
ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ
ಕಲಬುರಗಿ.ಮಾ.11.(ಕ.ವಾ.)-ಚಿತ್ತಾಪುರ ತಾಲೂಕಿನ ಕೋರವಾರ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯು 2019ರ ಏಪ್ರಿಲ್ 6 ರಂದು ಚಿಂಚೋಳಿ, ಸೇಡಂ ಹಾಗೂ ಚಿತ್ತಾಪುರ ತಾಲೂಕಿನ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ. 
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಡೌನ್‍ಲೋಡ್ ಮಾಡುವಾಗ ಏನಾದರೂ ಸಮಸ್ಯೆ ಬಂದಲ್ಲಿ ಅರ್ಜಿ ಸಲ್ಲಿಸಿದ ನೋಂದಣಿ ಸಂಖ್ಯೆ ಹಾಗೂ ಪಾಸ್‍ವರ್ಡ್‍ದೊಂದಿಗೆ ಕೋರವಾರ ಜವಾಹರ ನವೋದಯ ವಿದ್ಯಾಲಯವನ್ನು ಹಾಗೂ ಮೊಬೈಲ್ ಸಂಖ್ಯೆ 9449385301, 6360099749ಗಳಿಗೆ ಸಂಪರ್ಕಿಸಬೇಕೆಂದು ಕೋರವಾರ ಜವಾಹರ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...