ಲೋಕಸಭಾ ಚುನಾವಣೆ; ಆಪ್-ಕಾಂಗ್ರೇಸ್ ಸೀಟು ಹೊಂದಾಣಿಕೆ-ಇಂಡಿಯ ಕೂಟಕ್ಕೆ ಬಲ

Source: SOnews | By Staff Correspondent | Published on 24th February 2024, 5:21 PM | National News |

ಗುಜರಾತ್‌, ಹರ್ಯಾಣ, ಗೋವಾ ಮತ್ತು ಚಂಡೀಗಢದಲ್ಲೂ ಸೀಟು ಹಂಚಿಕೆ ಸೂತ್ರ


ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಹೋರಾಡಲು ಆಮ್‌ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್‌ 4:3 ಅನುಪಾತದಲ್ಲಿ ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿವೆ.

ಗುಜರಾತ್‌, ಹರ್ಯಾಣ, ಗೋವಾ ಮತ್ತು ಚಂಡೀಗಢದಲ್ಲೂ ಸೀಟು ಹಂಚಿಕೆ ಸೂತ್ರವನ್ನು ಅನುಸರಿಸಲು ಎರಡೂ ಪಕ್ಷಗಳು ಸಹಮತಕ್ಕೆ ಬಂದಿವೆ.  ದಿಲ್ಲಿಯಲ್ಲಿ ಕೇಜ್ರಿವಾಲ್‌ ಅವರ ಪಕ್ಷ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ, ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಲಿದೆ. ಪಶ್ಚಿಮ ದಿಲ್ಲಿ, ದಕ್ಷಿಣ ದಿಲ್ಲಿ, ಪೂರ್ವ ದಿಲ್ಲಿ ಮತ್ತು ಹೊಸದಿಲ್ಲಿಯಲ್ಲಿ ಆಪ್‌ ಸ್ಪರ್ಧಿಸಲಿದ್ದರೆ ಈಶಾನ್ಯ ದಿಲ್ಲಿ, ವಾಯುವ್ಯ ದಿಲ್ಲಿ ಮತ್ತು ಚಾಂದನಿ ಚೌಕ್‌ನಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ.  2019 ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಏಳು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

Read These Next

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...