ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

Source: SO News | By Laxmi Tanaya | Published on 24th March 2024, 8:44 PM | Coastal News | Don't Miss |

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಈಗಾಗಲೇ ವೇಳಾಪಟ್ಟಿಯನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ)ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ135(ಸಿ)ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಎಪ್ರಿಲ್ 24ರ ಸಂಜೆ 5 ಗಂಟೆಯಿಂದ ಎಪ್ರಿಲ್ 26ರ ಮಧ್ಯರಾತ್ರಿ 12ರವರೆಗೆ ಹಾಗೂ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂ. 4ರ ಮಧ್ಯರಾತ್ರಿ 12ಗಂಟೆ ಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...