ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

Source: S O news | By Staff Correspondent | Published on 22nd March 2024, 12:46 AM | National News | Coastal News |

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ಪ್ರದೇಶದ 2, ಗುಜರಾತಿನ 11, ಮಹಾರಾಷ್ಟ್ರದ 7, ರಾಜಸ್ಥಾನದ 6, ತೆಲಂಗಾಣದ 5, ಪಶ್ಚಿಮ ಬಂಗಾಳದ 8, ಪುದುಚೇರಿಯ 1 ಕ್ಷೇತ್ರಗಳಿಗೆ ಸೇರಿ ಒಟ್ಟು 57 ಅಭ್ಯರ್ಥಿಗಳ ಹೆಸರು ಪ್ರಕಟಸಲಾಗಿದೆ. 

ಕರ್ನಾಟಕದ ದಕ್ಷಿಣ ಕನ್ನಡಕ್ಕೆ ಪದ್ಮರಾಜ್‌, ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಮೈಸೂರು - ಕೊಡಗಿಗೆ ಎಂ.ಲಕ್ಷ್ಮಣ್ ಹಾಗೂ ಕಲಬುರಗಿಯಲ್ಲಿ ರಾಧಾ ಕೃಷ್ಣ ದೊಡ್ಮನಿ ಸೇರಿದಂತೆ ರಾಜ್ಯದ 17 ಮಂದಿಗೆ ಟಿಕೆಟ್‌ ಘೋಷಿಸಿದೆ. 

ಲೋಕಸಭಾ ಚುನಾವಣೆ ಸಂಬಂಧ ಎಐಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ರಾಜ್ಯದ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿತ್ತು.  ರಾಜ್ಯದ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿವೆ : 

ಬೆಂಗಳೂರು ಉತ್ತರ : ಪ್ರೊ. ರಾಜೀವ್‌ ಗೌಡ 

ಉಡುಪಿ ಚಿಕ್ಕಮಗಳೂರು : ಜಯಪ್ರಕಾಶ್‌ ಹೆಗ್ಡೆ 

ಕೊಪ್ಪಳ : ರಾಜಶೇಖರ್ ಹಿಟ್ನಾಳ್ 

ಉತ್ತರ ಕನ್ನಡ : ಅಂಜಲಿ ನಿಂಬಾಳ್ಕರ್ 

ಬೆಂಗಳೂರು ಕೇಂದ್ರ : ಮನ್ಸೂರ್ ಖಾನ್ 

ಬೆಂಗಳೂರು ದಕ್ಷಿಣ : ಸೌಮ್ಯ ರೆಡ್ಡಿ 

ಚಿತ್ರದುರ್ಗ : ಚಂದ್ರಪ್ಪ 

ಬೆಳಗಾವಿ : ಮೃಣಾಳ್‌ ಹೆಬ್ಬಾಳ್ಕರ್ 

ಬಾಗಲಕೋಟೆ : ಸಂಯುಕ್ತಾ ಪಾಟೀಲ್ 

ಚಿಕ್ಕೋಡಿ : ಪ್ರಿಯಾಂಕಾ ಜಾರಕಿಹೊಳಿ 

ಹುಬ್ಬಳ್ಳಿ-ಧಾರವಾಡ : ವಿನೋದ್‌ ಅಸೂಟಿ 

ದಾವಣಗೆರೆ : ಪ್ರಭಾ ಮಲ್ಲಿಕಾರ್ಜುನ್ 

ಕಲಬುರಗಿ : ರಾಧಾಕೃಷ್ಣ ದೊಡ್ಮನಿ 

ದಕ್ಷಿಣ ಕನ್ನಡ : ಪದ್ಮರಾಜ್ 

ಬೀದರ್ : ಸಾಗರ್‌ ಖಂಡ್ರೆ 

ರಾಯಚೂರು : ಕುಮಾರ್‌ ನಾಯ್ಕ್ 

ಮೈಸೂರು ಕೊಡಗು : ಎಂ.ಲಕ್ಷ್ಮಣ್

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...