ಲೋಕಸಭಾ ಚುನಾವಣೆ; ಪೋಲಿಂಗ್ ಅಧಿಕಾರಿಗಳು ಹಾಗೂ ಸಹಾಯಕ ಪೋಲಿಂಗ್ ಅಧಿಕಾರಿಗಳ ತರಬೇತಿ 

Source: sonews | By Staff Correspondent | Published on 31st March 2019, 10:07 PM | Coastal News | Don't Miss |

ಭಟ್ಕಳ: ಲೋಕಸಭಾ ಚುನಾವಣೆಯ ಪ್ರಯುಕ್ತ ಭಟ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿರುಸಿನ ತಯಾರಿ ನಡೆಸಿದ್ದು ಇಲ್ಲಿನ ಆನಂದ ಆಶ್ರಮ ಕಾನ್ವೆಂಟ್ ಶಾಲಾ ಆವರಣದಲ್ಲಿ ಪೋಲಿಂಗ್ ಅಧಿಕಾರಿಗಳು ಹಾಗೂ ಸಹಾಯಕ ಪೋಲಿಂಗ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಉಪ ವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಅವರ ನೇತೃತ್ವದಲ್ಲಿ ನಡೆಯಿತು. 

ಎಪ್ರಿಲ್ ತಿಂಗಳ 23ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆನರಾ ಕ್ಷೇತ್ರದ ಸಂಸತ್ ಚುನಾವಣೆಯು ನಡೆಯಲಿದ್ದು ಈಗಾಗಲೇ ಅಗತ್ಯದ ಸಿಬ್ಬಂದಿಗಳ ನೇಮಕವಾಗಿದ್ದು ಅವರಿಗೆ ಚುನಾವಣಾ ಕರ್ತವ್ಯದ ಕುರಿತು ಹಾಗೂ ಮತಯಂತ್ರ ಮತ್ತು ವಿ.ವಿ. ಪ್ಯಾಟ್ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. 

ತಾಲೂಕಿನಿಂದ ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸುವ ಪೋಲಿಂಗ್ ಅಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳಿಗೆ ಮಾತ್ರ ತರಬೇತಿ ಹಮ್ಮಿಕೊಂಡಿದ್ದು ಭಟ್ಕಳ ತಾಲೂಕಿನಿಂದ ಒಟ್ಟೂ 117 ಪೋಲಿಂಗ್ ಅಧಿಕಾರಿಗಳು, 106 ಸಹಾಯಕ ಪೋಲಿಂಗ್ ಅಧಿಕಾರಿಗಳು ಭಾಗವಹಿಸಿದ್ದರು.  ತರಬೇತಿಯು ಕಡ್ಡಾಯವಾಗಿದ್ದರೂ ಸಹ ಕೆಲವು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಮೌಲ್ಯ ಮಾಪನಕ್ಕೆ ಹೋಗಿರುವುದರಿಂದ ಇಂದು ಗೈರು ಹಾಜರಾಗಿದ್ದು ಅವರಿಗೆ ಪ್ರತ್ಯೇಕ ತರಬೇತಿಯನ್ನು ನೀಡಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ಉಪ ವಿಭಾಗದ ಉಪ ವಿಭಾಗಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಅವರು ಹೇಳಿದರು. 

ಭಟ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಭಟ್ಕಳ ಮತ್ತು ಹೊನ್ನಾವರದಲ್ಲಿ ತರಬೇತಿಯನ್ನು ಹಮ್ಮಿಕೊಂಡಿದ್ದು ತರಬೇತಿಯು ಅತ್ಯಂತ ಯಶಸ್ವೀಯಾಗಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದೂ ಇದೇ ಸಂದರ್ಭದಲ್ಲಿ ತಿಳಿಸಿದರು. 

ತಹಸೀಲ್ದಾರ್ ಪಾಟೀಲ್, ಎಲ್.ಎ.ಭಟ್ಟ, ಸಂತೋಷ ಭಂಡಾರಿ ಸೇರಿದಂತೆ ಇನ್ನಿತರರು ಉಪಸ್ಥಿತರರಿದ್ದರು. 

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...