ಕಾರವಾರ: ಫೆ.25 ರಿಂದ 29 ರವರೆಗೆ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ

Source: S O News Service | By Office Staff | Published on 19th February 2020, 9:21 PM | Coastal News |

ಕಾರವಾರ: ಕರ್ನಾಟಕ ಲೋಕಾಯುಕ್ತ, ಕಾರವಾರ ಘಟಕದ ಪೂಲೀಸ್ ಅಧಿಕಾರಿಗಳು ಜಿಲ್ಲೆಯ ವಿವಿಧ ಸ್ಥಳಗಳಿಗೆ ಬೇಟಿ ನೀಡಿ ಸಾರ್ವಜನಿಕರಿಂದ ಲೋಕಾಯುಕ್ತ ದೂರು ಅರ್ಜಿ ನಮೂನೆ 1 ಮತ್ತು 2 ನ್ನು ಸ್ವೀಕರಿಸುವರು.
    ಫೆ. 25 ರಂದು ಮಂಗಳವಾರ ಬೆಳಿಗ್ಗೆ 11:30 ರಿಂದ 1 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 2:30 ರಿಂದ ಸಂಜೆ 4 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರದಲ್ಲಿ, ಫೆ 26 ರಂದು ಬೆಳಿಗ್ಗೆ 11:30 ರಿಂದ 12:30 ರವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 2:30 ರಿಂದ 4 ಗಂಟೆಯವರೆಗೆ ಅಂಕೋಲಾ ಪ್ರವಾಸಿ ಮಂದಿರದಲ್ಲಿ, ಫೆ 27 ರಂದು ಬೆಳಿಗ್ಗೆ 11 ರಿಂದ 1ಗಂಟೆಯವರೆಗೆ ಮುಂಡಗೋಡ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 2:30 ರಿಂದ ಸಂಜೆ 4 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರದಲ್ಲಿ, ಫೆ 28 ರಂದು ಬೆಳಿಗ್ಗೆ 11 ರಿಂದ 12:30 ರವರೆಗೆ ಶಿರಸಿ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 2:30 ರಿಂದ 4 ಗಂಟೆಯವರೆಗೆ ಸಿದ್ದಾಪುರ  ಪ್ರವಾಸಿ ಮಂದಿರದಲ್ಲಿ, ಫೆ 29 ರಂದು ಬೆಳಿಗ್ಗೆ 11 ರಿಂದ 12:30 ರವರೆಗೆ ಜೊಯಿಡಾ ಪ್ರವಾಸಿ ಮಂದಿರದಲ್ಲಿ ಹಾಗೂ ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾರವಾರದ ಪೂಲೀಸ್ ಅಧೀಕ್ಷಕರ ಕಚೇರಿಯಲ್ಲಿ  ಮಧ್ಯಾಹ್ನ 2:30 ರಿಂದ 4 ಗಂಟೆಯವರೆಗೆ ಹಳಿಯಾಳ  ಪ್ರವಾಸಿ ಮಂದಿರದಲ್ಲಿ ಅರ್ಜಿಯನ್ನು ಸ್ವೀಕರಿಸುವರು.
    ದೂರು ನೀಡುವವರು ಸಿವಿಲ್ ಮತ್ತು ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಹೊರತುಪಡಿಸಿ ಸಾರ್ವಜನಿಕ/ಸರ್ಕಾರಿ ನೌಕರರ ಕರ್ತವ್ಯ ಲೋಪಕ್ಕೆ ಸಂಬಂದಿಸಿದಂತೆ ಅರ್ಜಿ ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿಡವಿಟ್ ಮಾಡಿ ಸಂಬಂದಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ ಬಹುಮಹಡಿಗಳ ಕಟ್ಟಡ, ಬಿ.ಆರ್.ಅಂಬೇಡ್ಕರ್ ಬೀದಿ ಬೆಂಗಳೂರಿಗೆ ಸಲ್ಲಿಸಬಹುದಾಗಿದೆ.
    ಅನಾಮದೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲವಾದ್ದರಿಂದ, ಅರ್ಜಿದಾರರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆಗಳನ್ನು ನಮೂದಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ:08382-222202, 222202, 222022, 220198 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

Read These Next

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...