ಶಾಲೆಗಳಲ್ಲಿ ಕೋವಿಡ್ ನಿಯಮ ಅನುಸರಿಸುವಂತೆ ಲೋಕಾಯುಕ್ತ ಉಪಾಧೀಕ್ಷಕರ ಸೂಚನೆ.

Source: SO News | By Laxmi Tanaya | Published on 21st September 2021, 9:56 PM | State News | Don't Miss |

ಶಿವಮೊಗ್ಗ : ಜಿಲ್ಲಾ ಕರ್ನಾಟಕ ಲೋಕಾಯುಕ್ತ  ಪೊಲೀಸ್ ಉಪಾಧೀಕ್ಷರು ನಗರದ ಸರ್ಕಾರಿ ಪ್ರೌಢಶಾಲೆ, ಜ್ಞಾನದೀಪ ಸೀನಿಯರ್ ಸೆಕೆಂಡರಿ ಸ್ಕೂಲ್, ಜಾವಳ್ಳಿ ಹಾಗೂ ಇತರೆ ಶಿವಮೊಗ್ಗ ನಗರ, ತಾಲೂಕುಗಳ ಸರ್ಕಾರಿ, ಖಾಸಗಿ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು, ವಿದ್ಯಾರ್ಥಿಗಳು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ, ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸುವಂತೆ, ದೈಹಿಕ ಅಂತರ ಕಾಯ್ದುಕೊಳ್ಳುವಂತೆ, ಹ್ಯಾಂಡ್ ಸ್ಯಾನಿಟೈಸರ್ ಮಾಡುವಂತೆ, ಮನೆಯಿಂದಲೇ ಕುಡಿಯುವ ನೀರು, ಆಹಾರಗಳನ್ನು ತರುವಂತೆ ಮತ್ತು ತಮ್ಮ ಪಾಲಕರಿಂದ ಒಪ್ಪಿಗೆ ಪತ್ರ ಬರೆಸಿಕೊಂಡು ಶಾಲಾ ಮುಖ್ಯ ಶಿಕ್ಷಕರಿಗೆ ನೀಡುವಂತೆ ಸೂಚಿಸಿದರು.

 ಪ್ರಾಂಶುಪಾಲರು, ಮುಖ್ಯಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳ ಆಗಮನ, ನಿರ್ಗಮನದಲ್ಲಿ ದಟ್ಟಣೆಯಾಗದಂತೆ, ಎಲ್ಲಾ ವಿದ್ಯಾರ್ಥಿಗಳ ದೇಹದ ಉಷ್ಣತೆಯನ್ನು ಪರೀಕ್ಷಿಸಿ, ಹ್ಯಾಂಡ್ ಸ್ಯಾನಿಟೈಜರ್ ನೀಡುವಂತೆ, ಪ್ರತೀ ಬೆಂಚುಗಳಿಗೆ 02 ವಿದ್ಯಾರ್ಥಿಗಳನ್ನು ಮಾತ್ರ ಕೂರಿಸುವ ವ್ಯವಸ್ಥೆ ಮಾಡುವಂತೆ, ಶೌಚಾಲಯದಲ್ಲಿ ನೀರು, ಸೋಪು, ಸ್ಯಾನಿಟೈಜರ್ ವ್ಯವಸ್ಥೆ ಮಾಡುವಂತೆ ಹಾಗೂ ಪ್ರತೀ ಶಾಲೆಯಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಿ ಕೋವಿಡ್-19ರ ಮಾರ್ಗಸೂಚಿಗಳು ಪಾಲನೆಯಾಗುತ್ತಿರುವ ಬಗ್ಗೆ ಪ್ರತಿ ದಿನ ಸಂಜೆ ವರದಿ ನೀಡುವಂತೆ ಸೂಚಿಸಿದ್ದಾರೆ.

Read These Next

ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಕ್ರೀಡಾಕೂಟ. ಧಾರವಾಡ ಜಿಲ್ಲಾ ನೌಕರರ ಉತ್ತಮ ಸಾಧನೆ.

ಧಾರವಾಡ : 2021ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೂರು ದಿನಗಳ ಕಾಲ ...

ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಕ್ರೀಡಾಕೂಟ. ಧಾರವಾಡ ಜಿಲ್ಲಾ ನೌಕರರ ಉತ್ತಮ ಸಾಧನೆ.

ಧಾರವಾಡ : 2021ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೂರು ದಿನಗಳ ಕಾಲ ...

ಅ.28 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ : ಸಚಿವ ವಿ. ಸುನೀಲ್ ಕುಮಾರ್

ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ...