ಉಪ್ಪಿನಂಗಡಿ: ಆಟೊ ರಿಕ್ಷಾಕ್ಕೆ ಲಾರಿ ಢಿಕ್ಕಿ ಬಾಲಕ ಮೃತ್ಯು, ಮೂವರಿಗೆ ಗಾಯ

Source: S O News service | By I.G. Bhatkali | Published on 30th November 2021, 9:20 AM | Coastal News |

ಉಪ್ಪಿನಂಗಡಿ: ಅತೀ ವೇಗದಿಂದ ಬಂದ ಲಾರಿಯೊಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಹಿರ್ತಡ್ಕ ನಿವಾಸಿ ದಿ. ಅಶ್ರಫ್ ಎಂಬವರ ಪುತ್ರ, ಹಿರ್ತಡ್ಕ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಲ್ತಾಫ್ (12) ಮೃತ ಬಾಲಕ, ರಿಕ್ಷಾದಲ್ಲಿದ್ದ ಈತನ ತಾಯಿ ಖತೀಜಮ್ಮ, ಅಣ್ಣಆಶಿಕ್ ಮತ್ತು ಅಟೊ ರಿಕ್ಷಾ ಚಾಲಕ ಹಿರ್ತಡ್ಕ ನಿವಾಸಿ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಅಲ್ತಾಫ್‌ನ ತಾಯಿ ಮಂಗಳೂರಿನ ಬೆಂಗರೆ ನಿವಾಸಿಯಾಗಿದ್ದು, ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದವರು ಇಂದು ಬಸ್ಸಿನಲ್ಲಿ ಉಪ್ಪಿನಂಗಡಿ ಗೆ ಬಂದು, ಬಳಿಕ ಅಟೋ ರಿಕ್ಷಾದಲ್ಲಿ ಹಿರ್ತಡಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಲಾರಿಯು ಮತ ಮಸೀದಿಯ ಬಳಿಯ ತಿರುವಿನಲ್ಲಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಅತೀ ವೇಗದಿಂದ ಬಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಆಟೊ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನಾ ಪಿ. ಕುಮಾರ್, ಸಂಚಾರಿ ಸಬ್ ಇನ್ ಸ್ಪೆಕ್ಟರ್ ರಾಮ ನಾಯ್ಕ ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Read These Next

ಕೋವಿಡ್ ಹಿನ್ನಲೆ: ಹಲ್ಲುನೋವು, ತಲೆನೋವಿಗೆಂದು ಆಸ್ಪತ್ರೆಗೆ ಹೋಗಬೇಡಿ, ತುರ್ತು ಚಿಕಿತ್ಸೆ ಇದ್ದಲ್ಲಿ ಮಾತ್ರ ತೆರೆಳಿಯಿಂದ ಸರಕಾರ

ಕೇವಲ ಅನಾರೋಗ್ಯ ಪೀಡಿತರು ಹಾಗೂ ತುರ್ತು ಚಿಕಿತ್ಸೆ ಅವಶ್ಯಕತೆ ಇರುವವರು ಮಾತ್ರ ಆಸ್ಪತ್ರೆಗಳಿಗೆ, ಸೂಪರ್ ಸ್ಪೆಶಾಲಿಟಿ ...

ಭಟ್ಕಳದಲ್ಲಿ ಕೋವಿಡ್ ನಿಯಮ ಇನ್ನಷ್ಟು ಕಠಿಣ; ಮುರುಡೇಶ್ವರ ಬ್ರಹ್ಮರಥೋತ್ಸವ ರದ್ಧತಿಗೆ ಆದೇಶ; ಸೋಡಿಗದ್ದೆ ಜಾತ್ರೆಗೂ ಸಂಕಟ

ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಿಸುತ್ತಿದ್ದು, ಕೋವಿಡ್ ತಡೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಹೇರಲು ...