ಲಖನೌ: ಕಾನೂನುಬದ್ದ ಕಸಾಯಿಖಾನೆಗಳಿಗೇನೂ ತೊಂದರೆ ಇಲ್ಲ ಸಿಎಂ ಯೋಗಿ ಆದಿತ್ಯನಾಥ

Source: s o english | By Arshad Koppa | Published on 27th March 2017, 8:16 AM | National News | Special Report |

ಲಖನೌ, ಮಾರ್ಚ್: ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್ ಪಡೆ ಮತ್ತು ಅಧಿಕೃತ ಸಿಬ್ಬಂದಿಗೆ ಮಾತ್ರ ಅವಕಾಶವಿದ್ದು  ಅಧಿಕಾರವಿಲ್ಲದ ಯಾರಿಗೂ ಕಾಸಾಯಿಖಾನೆಗಳ ಮೇಲೆ ದಾಳಿ ನಡೆಸಲು ಅವಕಾಶವಿಲ್ಲ, ಮಾಡಿದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಉತ್ತರ ಪ್ರದೇಶದ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯೋಗಿ ಆದಿತ್ಯಾನಾಥರವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ಸ್ವಯಂಘೊಷಿತ ಗೋ ರಕ್ಷಕರು ಕಸಾಯಿಖಾನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲಖನೌ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳ ಮೇಲೆ ಸ್ವಯಂ ಘೊಷಿತ ಗೋ ರಕ್ಷಕರು ದಾಳಿ ನಡೆಸಿದರೆ ಅವರ ಮೇಲೂ ಕ್ರಮ ಜರುಗಿಸಲಾಗುತ್ತದೆ ಎಂದು ಡಿಜಿಪಿ ಜವೇದ್ ಅಹ್ಮದ್ ತಿಳಿಸಿದ್ದಾರೆ.

ಅಧಿಕೃತ ಕಸಾಯಿಖಾನೆಗಳ ಮೇಲೆ ಯಾವುದೇ ದಾಳಿ ನಡೆಸುವುದಿಲ್ಲ. ಯಾವುದೇ ಕಾರಣಕ್ಕೂ ಮುಗ್ಧರ ಮೇಲೆ ಶೋಷಣೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಡಿಜಿಪಿ ಸ್ಪಷ್ಟನೆ ನೀಡಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...