ಮದೀನಾ ಕಾಲೋನಿ ವಾರ್ಡ್ 1 ಮತ್ತು 2 ಸಮಸ್ಯೆ ಬಗೆಹರಿಸುವಂತೆ ಒತ್ತಾಯ.

Source: SO News | Published on 8th September 2020, 8:22 PM | Coastal News | Don't Miss |

ಭಟ್ಕಳ : ಭಟ್ಕಳ ಪುರಸಭೆಯ ವಾರ್ಡ್ ಸಂಖ್ಯೆ 1 ಮತ್ತು 2 ರಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮದೀನಾ ವೆಲ್ಪೆರ್ ಸೊಸೈಟಿ ವತಿಯಿಂದ ಅಧಿಕಾರಿಗಳಿಗೆ ಮನವಿ ಮಾಡಲಾಯಿತು. ಇಲ್ಲಿನ ಮದೀನಾ ವೇಲ್ಪೆರ್ ಹಾಲ್ ನಲ್ಲಿ ಜರುಗಿದ ಜನಸ್ಪಂದನಾ ಸಭೆಯಲ್ಲಿ ಮನವಿ ಮಾಡಿದರು.

ಮದೀನಾ ಕಾಲೋನಿ ವ್ಯಾಪ್ತಿಯಲ್ಲಿ ಸಮರ್ಪಕವಾದ ಬೀದಿದೀಪದ ವ್ಯವಸ್ಥೆ ಇಲ್ಲದಿರುವುದರಿಂದ ರಾತ್ರಿ‌ ಸಂಚರಿಸಲು ಭಯಪಡುವಂತಾಗಿದೆ. ಹೀಗಾಗಿ ಬೀದಿ ದೀಪ ದುರಸ್ಥಿ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಸರಿಯಾದ ಗಟಾರ ಇಲ್ಲದಿರುವುದರಿಂದ ಚರಂಡಿಯ ದುರ್ನಾತ ಅಸಹ್ಯ ಹುಟ್ಟಿಸುತ್ತಿದೆ. ಅಲ್ಲದೇ ಸೊಳ್ಳೆಗಳ ಸಂತಾನೋತ್ಪತ್ತಿಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಹೀಗಾಗಿ ಡೆಂಗ್ಯು, ಮಲೇರಿಯಾ ರೋಗ ಹರಡಲು ಕಾರಣವಾಗುತ್ತಿದೆ.

ರಸ್ತೆಗಳು ಹದಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಅಲ್ಲದೇ ಅಪಘಾತಗಳು ಸಂಭವಿಸಿ ಜನರ ಜೀವಕ್ಕೆ ತೊಂದರೆಯಾಗಿ ಪರಿಣಮಿಸಿದೆ.
ಹೀಗಾಗಿ ಮದೀನಾ ಕಾಲೋನಿಯ ವಾರ್ಡ್ ಸಂಖ್ಯೆ 1 ಮತ್ತು 2ರ ಸಮಸ್ಯೆ ಬಗೆ ಹರಿಸಲು ಕ್ರಮ ಕೈಗೊಳ್ಳಬೇಕೆಂದು ಮದೀನಾ ವೆಲ್ಪೆರ್ ಸೊಸೈಟಿ ವತಿಯಿಂದ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಪುರಸಭೆ ಮುಖ್ಯಾಧಿಕಾರಿ ದೇವರಾಜ, ವೇಣುಗೋಪಾಲ ಶಾಸ್ತ್ರಿ, ಆರೋಗ್ಯ ನಿರೀಕ್ಷಕ ಸುಜಿಯಾ ಸೋಮನ್, ವಾರ್ಡ್ ಸದಸ್ಯೆ ಸಬೀನಾ,ಮದೀನಾ ವೇಲ್ಪೆರ್ ಸೊಸೈಟಿ ಅಧ್ಯಕ್ಷ ಪ್ರೋ ಝರಾರಿ, ಪ್ರಧಾನ ಕಾರ್ಯದರ್ಶಿ ಮೌಲಾನಾ ಇರ್ಪಾನ್ ನದ್ವಿ, ಸಾಜಿದ್ ಮುಸ್ಬಾ ಮತ್ತು ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...