ಮುಂಬೈ: ಮಹಾರಾಷ್ಟ್ರ ಗೃಹಸಚಿವ ದೇಶಮುಖ್ ರಾಜೀನಾಮೆ

Source: VB | By S O News | Published on 6th April 2021, 12:01 PM | National News |

ಮುಂಬೈ: ಮುಂಬೈಯ ಮಾಜಿ ಪೊಲೀಸ್ ವರಿಷ್ಠ ಪರಮ್ ಬೀರ್ ಸಿಂಗ್ ಅವರ ಆರೋಪದ ಕುರಿತು 15 ದಿನಗಳ ಒಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಉಚ್ಚ ನ್ಯಾಯಾಲಯ ಸಿಬಿಐಗೆ ಆದೇಶ ನೀಡಿದ ಒಂದು ಗಂಟೆಯ ಬಳಿಕ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸೋಮವಾರ 'ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.

“ತಾನು ಯಾವುದೇ ತಪ್ಪು ಮಾಡಿಲ್ಲ' ಎಂದು ಹೇಳುವ ಮೂಲಕ ದೇಶಮುಖ್ ಅವರು ಕಳೆದ ಒಂದು ವಾರದಿಂದ ರಾಜೀನಾಮೆ ಆಗ್ರಹವನ್ನು ತಿರಸ್ಕರಿಸಿದ್ದರು. “ಸಿಬಿಐ ಈಗ ಅವರ ಬಗ್ಗೆ ತನಿಖೆ ನಡೆಸಲು ಆರಂಭಿಸಲಿದೆ. ಆದುದರಿಂದ ಅವರು ಸ್ಥಾನದಲ್ಲಿ ಮುಂದುವರಿಯುವುದು ಸೂಕ್ತವಲ್ಲ' ಎಂದು ದೇಶಮುಖ್ ಅವರ ನ್ಯಾಷನಲಿಸ್ಟಿಕ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ)ದ ನಾಯಕರೊಬ್ಬರು ಹೇಳಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...