ಘಾಝಿಯಾಬಾದ್: ರೈತರು ಪ್ರತಿಭಟನೆ ನಡೆಸುತ್ತಿರುವ ಘಾಝಿಪುರಕ್ಕೆ ಮಹಾತ್ಮಾ ಗಾಂಧಿ ಮೊಮ್ಮಗಳ ಭೇಟಿ

Source: VB News | By S O News | Published on 16th February 2021, 11:30 AM | National News |

ಘಾಝಿಯಾಬಾದ್: ಕೇಂದ್ರ  ಸರಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸಲು ಮಹಾತ್ಮಾ ಗಾಂಧಿ ಅವರ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚಾರ್ಜಿ ಅವರು ದಿಲ್ಲಿ-ಉತ್ತರಪ್ರದೇಶ ಗಡಿಯಲ್ಲಿನ ಘಾಝಿಪುರಕ್ಕೆ ಭೇಟಿ ನೀಡಿದರು.

ರಾಷ್ಟ್ರೀಯ ಗಾ೦ಧಿ ಸಂಗ್ರಹಾಲಯದ ಅಧ್ಯಕ್ಷರೂ ಆಗಿರುವ 84ರ ಹರೆಯದ ಭಟ್ಟಾಚಾರ್ಜಿ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ರೈತರಿಗೆ ಸಲಹೆ ನೀಡಿದರು. ಅಲ್ಲದೆ, ರೈತ ಸಮುದಾಯದ ಬಗ್ಗೆ ಕಾಳಜಿ ವಹಿಸುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದರು ಎಂದು ಭಾರತೀಯ ಕಿಸಾನ್ ಒಕ್ಕೂಟದ ಹೇಳಿಕೆ ತಿಳಿಸಿದೆ. ಅವರೊಂದಿಗೆ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ, ಅಖಿಲ ಭಾರತ ಸರ್ವ ಸೇವಾ ಸಂಘದ ಆಡಳಿತ ಟ್ರಸ್ಟಿ ಅಶೋಕ್ ಶರಣ್, ಗಾಂಧಿ ಸ್ಮಾರಕ ನಿಧಿಯ ನಿರ್ದೇಶಕ ಸಂಜಯ್ ಸಿಂಗ್ ಹಾಗೂ ರಾಷ್ಟ್ರೀಯ ಗಾಂಧಿ ವಸ್ತು ಸಂಗ್ರಹಾಲಯದ ನಿರ್ದೇಶಕ ಎ. ಅಣ್ಣಾಮಲೈ ಮೊದಲಾದವರು ಇದ್ದರು.

ನಾವು ಯಾವುದೇ ರಾಜಕೀಯ ಕಾರ್ಯಕ್ರಮದ ಭಾಗವಾಗಿ ಇಲ್ಲಿಗೆ ಆಗಮಿಸಿಲ್ಲ. ನಮ್ಮ ಬದುಕನ್ನು ಪೋಷಿಸುತ್ತಿರುವ ರೈತರಿಗಾಗಿ ನಾವು ಇಂದು ಇಲ್ಲಿಗೆ ಬಂದಿದ್ದೇವೆ ಎಂದು ಭಟ್ಟಾಚಾರ್ಜಿ ಹೇಳಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

“ನಿಮ್ಮೆಲ್ಲರಿಂದಾಗಿ ನಾವಿದ್ದೇವೆ. ರೈತರಿಗೆ ಒಳಿತಾದಲ್ಲಿ ದೇಶಕ್ಕೆ ಹಾಗೂ ನಮ್ಮೆಲ್ಲರಿಗೆ ಒಳಿತಾಗಲಿದೆ' ಎಂದು ನವೆಂಬರ್ ನಿಂದ ಘಾಝಿಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಟ್ಟಾಚಾರ್ಜಿ ಹೇಳಿರುವುದಾಗಿ ಹೇಳಿಕೆ ತಿಳಿಸಿದೆ. ತಾನು ರೈತರ ಪರವಾಗಿ ಪ್ರಾರ್ಥನೆ ಸಲ್ಲಿಸಲು ಇಲ್ಲಿಗೆ ಆಗಮಿಸಿರುವುದಾಗಿ ಭಟ್ಟಾಚಾರ್ಜಿ ಅವರು ಹೇಳಿರುವುದಾಗಿ ಭಾರತೀಯ ಕಿಸಾನ್ ಒಕ್ಕೂಟದ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲ್ಲಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...