ಕೋವಿಡ್ ನಿಯಂತ್ರಸುವಲ್ಲಿ ಜಿಲ್ಲಾಡಳಿತದ ಕ್ರಮ ಶ್ಲಾಘನೀಯ- ಸಚಿವ ಹೆಚ್.ನಾಗೇಶ್

Source: sonews | By Staff Correspondent | Published on 5th August 2020, 9:37 PM | State News |

ಕೋಲಾರ : ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಿಸಲು ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ ಎಂದು ಅಬಕಾರಿ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ತಿಳಿಸಿದರು .

ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ -19 ವೈರಸ್ ವಿಚಾರವಾಗಿ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳ ಕಾರ್ಯವೈಖರಿಯಿಂದ ಕರೋನವನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದರು. ಜಿಲ್ಲೆಯಲ್ಲಿ ಇದುವರೆಗೂ 1497 ಕೋವಿಡ್ ಸೋಂಕಿತರಿದ್ದು, 806 ಜನ ಗುಣಮುಖರಾಗಿದ್ದಾರೆ, 29 ಜನ ಕೋವಿಡ್ -19 ನಿಂದ ಮೃತ ಪಟ್ಟಿದ್ದು, 662 ಕೋವಿಡ್ -19 ಪ್ರಕರಣಗಳು ಸಕ್ರಿಯವಾಗಿವೆ ಎಂದ ಅವರು ಜಿಲ್ಲೆಯಲ್ಲಿ ಕೋವಿಡ್ -19 ರಿಂದ ಮೃತ ಪಟ್ಟವರ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು. ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಅವಶ್ಯಕವಿರುವ ಉಪಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು .

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್. ರಮೇಶ್ ಕುಮಾರ್ ಅವರು ಮಾತನಾಡಿ, ಕೋವಿಡ್ -19 ಸಾಂಕ್ರಮಿಕ ರೋಗದ ಬಗ್ಗೆ ಗ್ರಾಮೀಣ ಜನರಲ್ಲಿ ಅರಿವು ಕಡಿಮೆಯಿದ್ದು, ಮಾಧ್ಯಮಗಳ ಮೂಲಕ ಜನರಿಗೆ ಅರಿವನ್ನು ಮೂಡಿಸಬೇಕು ಎಂದರು .

ಕೋವಿಡ್ ಅಲ್ಲದ ರೋಗಿಗಳು ಆಸ್ಪತ್ರೆಗೆ ಬಂದಂತಹ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್ -19 ಟೆಸ್ಟ್ ಮಾಡುವಂತೆ ವೈದ್ಯರು ಒತ್ತಡ ಹೇರುತ್ತಿದ್ದು, ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಹೇಳಿದರು . 

ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್ ಅವರು ಮಾತನಾಡಿ ಕೋವಿಡ್ ಅಲ್ಲದ ರೋಗಿಗಳಿಗೆ ಪ್ರತ್ಯೇಕವಾಗಿ 100 ಹಾಸಿಗೆಗಳನ್ನು ಮೀಸಲಿಡಬೇಕೆಂದು ತಿಳಿಸಿದರು. ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಿಸಲು ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದಾರೆ . 

ಕೋವಿಡ್ -19 ಸೋಂಕಿಗೆ ತುತ್ತಾದ ವ್ಯಕ್ತಿಯ ಮನೆಯ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯವನ್ನಾಗಿ ಪರಿವರ್ತಿಸಲಾಗುತ್ತದೆ . ಕಂಟೈನ್‌ಮೆಂಟ್ ವಲಯಗಳಿಗೆ ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಬರುವುದಿಲ್ಲ ಎಂದು ಮಾಹಿತಿ ನೀಡಿದರು .

ಸಭೆಯಲ್ಲಿ ಶಾಸಕರಾದ ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಗೋವಿಂದ ರಾಜು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ.ಎಸ್. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ, ಕೆ.ಜಿ.ಎಫ್.ಪೊಲೀಸ್ ವರಿಷ್ಠಾಧಿಕಾರಿಗಳಾದ ಇಲಕಿಯಾ ಕರಣಾಕರನ್, ಅಪರ ಜಿಲ್ಲಾಧಿಕಾರಿಗಳಾದ ಶಿವಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಸೋಮಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿಜಯ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಚಾರಿಣಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು .

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

Read These Next

ಸಪ್ಟೆಂಬರ್ 28 ರಂದು ಕರ್ನಾಟಕ ಬಂದ್ ಹಿನ್ನೆಲೆ. ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 29 ಕ್ಕೆ.

ಬೆಂಗಳೂರು : ಸಪ್ಟೆಂಬರ್ 28 ರಂದು ನಡೆಯುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮುಂದೂಡಿದೆ.