ಪೌಷ್ಠಿಕಯುಕ್ತ ಆಹಾರ ಸೇವನೆಯಿಂದ ಉತ್ತಮ ಆರೊಗ್ಯ ಕಾಪಾಡಿಕೊಳ್ಳುವಂತೆ ಸೂಚನೆ

Source: SO News | By Laxmi Tanaya | Published on 15th September 2021, 9:39 AM | State News | Don't Miss |

ಹಾಸನ : ಮಹಿಳೆಯರು ಪೌಷ್ಠಿಕಯುಕ್ತ ಆಹಾರ ಸೇವಿಸುವುದರ ಮೂಲಕ ಉತ್ತಮ ಆರೊಗ್ಯ ಹೊಂದಲು ಕಾಳಜಿವಹಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯರಾದ ಶ್ಯಾಮಲ ಎಸ್. ಕುಂದುರ್ ಅವರು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನೆ  ವತಿಯಿಂದ  ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಯೋಗ, ಧ್ಯಾನ ಮಾಡುವುದನ್ನು ರೂಡಿಸಿಕೊಂಡಲ್ಲಿ ತಮ್ಮ ಆರೋಗ್ಯವನ್ನು ಸುರಕ್ಷಿತವಾಗಿಟ್ಟುಕೊಳ್ಳಬಹುದು ಎಂದು ಅವರು ಹೇಳಿದರು.

ಮಹಿಳೆಯರು ಸಖಿ ಒನ್ ಸ್ಟಾಪ್ ಕೇಂದ್ರಕ್ಕೆ ಭೇಟಿ ನೀಡಿದರೆ  ಕಾನೂನು, ಆರೋಗ್ಯ, ಮಾನಸಿಕ ಸಮಸ್ಯೆಗಳು ಸೇರಿದಂತೆ ಎಲ್ಲಾ ಗೊಂದಲಗಳಿಗೆ  ಪರಿಹಾರವನ್ನು ಕಂಡುಕೊಳ್ಳಬಹುದು ಎಂದರು. 

ಮಹಿಳೆಯರು ತಮ್ಮಲ್ಲಿರುವ ಪ್ರತಿಭೆಯನ್ನು ಬಳಸಿಕೊಂಡು  ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸ್ವಾವಲಂಬಿಯಾಗಿ ಜೀವಿಸಬೇಕು ಎಂದು ಅವರು ಹೇಳಿದರು.  

 ತಾಯಂದಿರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ನಿಗಾವಹಿಸುವುದರ ಜೊತೆಗೆ  ಅವರು ಮೊಬೈಲ್ ಮಿತ ಬಳಕೆ ಮಾಡುವಂತೆ ಎಚ್ಚರವಹಿಸಿ ಸಂಸ್ಕೃತಿ, ಸಂಸ್ಕಾರ ಕಲಿಸಿ ಉತ್ತಮ ಮಾರ್ಗದರ್ಶಕರಾಗಬೆಕು  ಎಂದರು.   

ಸಮಾಜದಲ್ಲಿ ಮಹಿಳೆ ಮತ್ತು ಪುರುಷ ಇಬ್ಬರಿಗೂ ಸಮಾನವಾದ ಸ್ಥಾನಮಾನ ಲಭಿಸಬೇಕು ಮಹಿಳೆಯರು ಮುಕ್ತವಾಗಿ ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲಿ ಸಬಲರಾಗಬೇಕು  ಎಂದು ಆವರು ಹೇಳಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು ಹಾಗೂ ಮಗುವಿನ ಆರೋಗ್ಯವನ್ನು ಉತ್ತಮವಾಗಿ ಕಾಪಾಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ  ಸದುಪಯೋಗಪಡಿಸಿಕೊಳ್ಳಿ  ಹಾಗೂ ವೈದ್ಯರ ಸಲಹೆಯನ್ನು ಸಕಾಲದಲ್ಲಿ  ಸ್ವೀಕರಿಸಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸುವಂತೆ  ಸಲಹೆ ನೀಡಿದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್ ನಂದಿನಿ ಅವರು ಮಾತನಾಡಿ ಬಾಲ್ಯ ವಿವಾಹ ಪದ್ಧತಿಯಿಂದ ಮಕ್ಕಳ ಮೇಲೆ ದುಷ್ಪರಿಣಾಮ ಬೀರುವುದರಿಂದ  ಬಾಲ್ಯ ವಿವಾಹ ತಡೆಯುವಲ್ಲಿ  ಮಹಿಳೆಯರು ಪ್ರಮುಖ ಪಾತ್ರ ವಹಿಸಬೇಕು ಎಂದರಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಲ್ಲಾ  ಕ್ಷೇತ್ರಗಳಲ್ಲಿ  ಸದೃಡರಾಗಬೇಕು ಎಂದು ಅವರು ಹೇಳಿದರು. 

ಬಾಲ್ಯ ವಿವಾಹ ಪ್ರಕರಣಗಳು ಹಾಗೂ  ಬೀದಿಬದಿಯಲ್ಲಿ  ಓಡಾಡುವಂತ ಮಹಿಳೆಯರೂ ಕಂಡು ಬಂದರೆ ದೂ.ಸಂ 112 ಗೆ ಕರೆ ಮಾಡುವ ಮೂಲಕ ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ  ಮಾಹಿತಿ ನೀಡುವಂತೆ ಹೇಳಿದರು.

ತಾಯಂದಿರು ತಮ್ಮ ಮಕ್ಕಳು ಅಡ್ಡದಾರಿ ಅಥವಾ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರವಹಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಿಸಿ ಎಂದರು.  

ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಸ್ವತಃ ತಯಾರಿಸಿದ ಆಹಾರ ಪದಾರ್ಥಗಳನ್ನು ಪ್ರದರ್ಶನ ಏರ್ಪಡಿಸಲಾಗಿತ್ತು  ಅಧಿಕಾರಿಗಳು ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿ ಉತ್ತಮ ಪೌಷ್ಠಿಕಯುಕ್ತಾ ಆಹಾರ ಪದಾರ್ಥಗಳೆಂದು ಆಯ್ಕೆಯಾದವರಿಗೆ  ಬಹುಮಾನ ವಿತರಣೆ ಮಾಡಲಾಯಿತು.    

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಶಟ್ಟಪ್ಪನವರ್, ಶಿಶು ಅಭಿವೃದ್ದಿ ಯೋಜನೆ ಅಧಿಕಾರಿ ದಿಲೀಪ್, ಜಿಲ್ಲಾ ಆಯುಷ್ ಅಧಿಕಾರಿ ಡಾ|| ವೀಣಾಲತಾ, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಧಿಕಾರಿ ಮಂಜುಳಾ, ಜಿಲ್ಲಾ ಉಪ ಆರೋಗ್ಯ ಮತ್ತು ಶಿಕ್ಷಣಧಿಕಾರಿ ಅರುಂಧತಿ ಹಾಗೂ ಮತ್ತಿತರು ಹಾಜರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...