ಹೆಜಮಾಡಿಯಲ್ಲಿ ಟೋಲ್ ದರ ಯಥಾಸ್ಥಿತಿ ಕಾಪಾಡಿ : ಉಸ್ತುವಾರಿ ಸಚಿವ ಎಸ್.ಅಂಗಾರ

Source: SO News | By Laxmi Tanaya | Published on 3rd December 2022, 10:01 PM | Coastal News |

ಉಡುಪಿ : ಜಿಲ್ಲೆಯ ಹೆಜಮಾಡಿ ಟೋಲ್ಗೇಟ್ನಲ್ಲಿ ಈ ಹಿಂದೆ ಪಡೆಯುತ್ತಿರುವ ದರಗಳನ್ನು ಮಾತ್ರ ಪಡೆಯುವಂತೆ ಹಾಗೂ ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರಗಳನ್ನು ಪಡೆಯದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ ನೀಡಿದರು. 

  ಅವರು  ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹಣೆ ಮಾಡುವ ವಿಚಾರದ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

  ಸುರತ್ಕಲ್ ಟೋಲ್ ಪ್ಲಾಜಾವನ್ನು ರದ್ದುಪಡಿಸಿ ಅದರ ದರಗಳನ್ನು ಹೆಜಮಾಡಿ ಟೋಲ್ನಲ್ಲಿ ವಿಲೀನಗೊಳಿಸಿ ಪರಿಷ್ಕೃತ ದರಗಳನ್ನು ಪಡೆಯುವ ಕುರಿತಂತೆ ಜಿಲ್ಲಾಡಳಿತದ ಮತ್ತು ಜನಪ್ರತಿನಿಧಿಗಳ ಯಾವುದೇ ಅಭಿಪ್ರಾಯಗಳನ್ನು ಕೇಳದೇ ಏಕಮುಖವಾಗಿ ನಿರ್ಧರಿಸಿರುವುದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಟೋಲ್ ದರ ಹೆಚ್ಚಳ ಕುರಿತಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದು, ಅಲ್ಲಿಯವರೆಗೆ ಯಥಾಸ್ಥಿತಿಯಲ್ಲಿ ಹಿಂದಿನ ದರದಲ್ಲಿಯೇ ವಾಹನಗಳಿಂದ ಶುಲ್ಕವನ್ನು ಪಡೆಯುವಂತೆ ಸೂಚನೆ ನೀಡಿದರು.

   ಉಡುಪಿ ಜಿಲ್ಲೆಯ ವಾಹನಗಳಿಗೆ ಹಿಂದಿನಂತೆಯೇ ನಿಗದಿತ ದರಗಳನ್ನು ಪಡೆಯುವಂತೆ,        ಪ್ರತ್ಯೇಕ ಲೇನ್ ವ್ಯವಸ್ಥೆ ಮಾಡುವಂತೆ ಹಾಗೂ ಸುರತ್ಕಲ್ನಲ್ಲಿ ಸ್ಥಳೀಯ ವಾಹನಗಳಿಗೆ ನೀಡುತ್ತಿದ್ದ ರಿಯಾಯಿತಿಗಳನ್ನು ಉಡುಪಿ ಜಿಲ್ಲೆಯ ವಾಹನಗಳಿಗೆ ನೀಡುವಂತೆ ಸಚಿವ ಸುನೀಲ್ ಕುಮಾರ್ ಹಾಗೂ ಶಾಸಕ ರಘುಪತಿ ಭಟ್ ತಿಳಿಸಿದರು.

  ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read These Next

ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದರೋಡೆ: ಸಾರ್ವಜನಿಕರ ಕೈಗೆ ಸಿಕ್ಕ ಬಿದ್ದ ಖತರ್ನಾಕ್ ಕಳ್ಳರು

ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದರೋಡೆ: ಸಾರ್ವಜನಿಕರ ಕೈಗೆ ಸಿಕ್ಕ ಬಿದ್ದ ಖತರ್ನಾಕ್ ಕಳ್ಳರು

ಬೆಂಗಳೂರು ಚಲೋ ಪೂರ್ವಭಾವಿ ಸಭೆ: ಅರಣ್ಯವಾಸಿಗಳ ಮೇಲೆ ದೌರ್ಜನ್ಯ ನಿಲ್ಲಿಸಿ. ರವೀಂದ್ರ ನಾಯ್ಕ

ಅರಣ್ಯವಾಸಿಗಳ ಮೇಲೆ ಕಾನೂನುಬಾಹೀರ ದೌರ್ಜನ್ಯ ಮತ್ತು ಕಿರುಕುಳ ನೀಡುವುದನ್ನು ನಿಯಂತ್ರಿಸಿ ಇಲ್ಲದಿದ್ದರೆ ಜಿಲ್ಲಾದ್ಯಂತ ಅರಣ್ಯ ...