ಕಾರವಾರ: ಲೋಕಸಭಾ ಚುನಾವಣೆಗೆ ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Source: S O News | By I.G. Bhatkali | Published on 10th March 2024, 8:33 PM | Coastal News |

ಕಾರವಾರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಯನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.

ಅವರು ಇಂದು ಕುಮಟಾ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಸೀಲ್ದಾರ್ ಗಳು ತಮ್ಮ ವ್ಯಾಪ್ತಿಯ ಮಠಗಟ್ಟೆಗಳಲ್ಲಿ ಎಲ್ಲಾ ಅಗತ್ಯ ಮೂಲ ಸೌಕರ್ಯ ಇರುವ ಬಗ್ಗೆ ಪರಿಶೀಲಿಸಿ ದೃಡೀಕರಣ ನೀಡಬೇಕು ಹಾಗೂ ಚುನಾವಣಾ ಕರ್ತವ್ಯ ಕ್ಕೆ ನಿಯೋಜಿಸಿರುವ ಸಿಬ್ಬಂದಿಗೆ ಸೂಕ್ತ ತರಬೇತಿ ಕಾರ್ಯಕ್ರಮ ಗಳನ್ನು  ಆಯೋಜಿಸಬೇಕು ಎಂದರು.

 ತಮ್ಮ ವ್ಯಾಪ್ತಿಯಲ್ಲಿ ನ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಬಗ್ಗೆ ಮಾಹಿತಿ ಸಲ್ಲಿಸಿ ಅಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು,  85 ವರ್ಷ ಮೇಲ್ಪಟ್ಟ ಮತದಾರರು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಮತಪತ್ರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಶೀಲ್ದಾರರು  C-Vigil, Encore, ಮಾದರಿ ನೀತಿ ಸಂಹಿತೆ ತಂಡ, ದೂರು ಮಾಹಿತಿ ಸಂಗ್ರಹ ತಂಡ, ಸುವಿಧಾ ವೆಬ್ ಪೋರ್ಟಲ್ ನಲ್ಲಿ ನೋಡಿಕೊಳ್ಳಲು, ವಾಹನಗಳಿಗೆ ಅನುಮತಿ, ರಾಜಕೀಯ/ಸಾಂಸ್ಕೃತಿಕ/ಧಾರ್ಮಿಕ/ಸಾಮಾಜಿಕ ಕಾರ್ಯಕ್ರಮ ಗಳಿಗೆ  ಅನುಮತಿ ನೀಡುವ ಸಲುವಾಗಿ ಸಿಬ್ಬಂದಿಗಳ ತಂಡ ರಚಿಸಿ ದೂರುಗಳು ಬಾರದಂತೆ ಕಾರ್ಯ ನಿರ್ವಹಿಸಬೇಕು ಎಂದರು.

ಸೂಕ್ತ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಚೆಕ್ ಪೋಸ್ಟ್ ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಹಾಗೂ ಅಲ್ಲಿನ ಸಿಬ್ಬಂದಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿಗಳಾದ  ಕನಿಷ್ಕ, ಅಪರ್ಣಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಉಪಸ್ಥಿತರಿದ್ದರು.

ಸಭೆಯ ನಂತರ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು,  ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
 

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...