ಪೌಷ್ಟಿಕ ಆಹಾರ ಪದಾರ್ಥಗಳಿಗೆ ಹೆಚ್ಚು ಪ್ರಾಧ್ಯಾನತೆ ನೀಡಿ: ಗೋವಿಂದರಾಜು

Source: SO News | By Laxmi Tanaya | Published on 15th September 2021, 9:48 AM | State News | Don't Miss |

ಬೆಂಗಳೂರು :  ಪೌಷ್ಟಿಕ ಆಹಾರ ಪದಾರ್ಥಗಳಿಗೆ ಹೆಚ್ಚು ಪ್ರಾಧಾನ್ಯತೆ ನೀಡುವುದರ ಜೊತೆಗೆ ವೈಯಕ್ತಿಕ ಹಾಗೂ ಶೌಚಾಲಯದ ಶುಚಿತ್ವದ ಬಗ್ಗೆ ಆದ್ಯತೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು ಅವರು ತಿಳಿಸಿದರು.

   ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಚೊಕ್ಕಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ (ಗಾರ್ಮೆಂಟ್ಸ್) ಮಹಿಳಾ ಕಾರ್ಮಿಕರಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಪೌಷ್ಠಿಕ ಆಹಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

   ಸ್ಥಳೀಯವಾಗಿ ಸಿಗುವ ಹಸಿರುಸೊಪ್ಪು, ತರಕಾರಿ, ಮೊಳಕೆ ಕಾಳು, ಹಾಲು ಮತ್ತು ಹಾಲಿನ ಉಪಯೋಗಗಳ ಬಳಕೆ, ಇವುಗಳನ್ನು ಉಪಯೋಗಿಸುವುದರ ಜೊತೆಗೆ ಮನೆಯಲ್ಲೇ ತಯಾರಿಸುವ ಆಹಾರ ಪದಾರ್ಥಗಳ ಬಳಕೆ ಹಾಗೂ ಪ್ರತಿ ಆರು ತಿಂಗಳಿಗೊಮ್ಮೆ ಅಲ್ಬೆಂಡೇಸಲ್ ಮಾತ್ರೆ ತೆಗೆದುಕೊಳ್ಳುವುದು ಮೂಲಕ ರಕ್ತಹೀನತೆ ತಡೆಗಟ್ಟಬಹುದೆಂದು ತಿಳಿಸಿದರು.

   ಕಾರ್ಯಕ್ರಮದಲ್ಲಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹನುಮಂತರಾಜು.ಎನ್., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಜಯಲಕ್ಷ್ಮಿ.ಬಿ, ಗಾರ್ಮೆಂಟ್ಸ್ ವ್ಯವಸ್ಥಾಪಕರು, ಮುಗಬಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಶಿವಗಂಗಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...