ನಿಗಧಿತ ಅವಧಿಯಲ್ಲಿ ಕಾಮಗಾರಿ ಪ್ರಗತಿ ಸಾಧಿಸಿ ಮತ್ತು ಫಲಾನುಭವಿಗಳ ಆಯ್ಕೆ ಮಾಡಿ :ಜಿಲ್ಲಾಧಿಕಾರಿ ದೀಪಾ ಚೋಳನ್ ನಿರ್ದೇಶನ

Source: so news | Published on 4th October 2019, 11:52 PM | State News | Don't Miss |

 

ಧಾರವಾಡ:ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ವೈಯಕ್ತಿಕ ಹಾಗೂ ಸಾಮುದಾಯಿಕ ಅಭಿವೃದ್ಧಿಗೆ ಉಪಯೋಜನೆಯಡಿ ಮೀಸಲಾಗಿರುವ ಅನುದಾನವನ್ನು ಕಾರಣ ಹೇಳದೆ ನಿಗದಿತ ಅವಧಿಯಲ್ಲಿ ಫಲಾನುಭವಿಗಳ ಆಯ್ಕೆ ಮತ್ತು ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ನಿರ್ದೇಶನ ನೀಡಿದರು.
ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ 2019-20 ನೇ ಸಾಲಿನ ಎಸ್‍ಸಿಪಿ ಮತ್ತು ಟಿಎಸ್‍ಪಿ ಉಪಯೋಜನೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿನ ಆಗಸ್ಟ್-2019ರ ವರೆಗೆ ಆಗಿರುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕೆಲವು ಇಲಾಖೆಗಳು ನಿಗಧಿತ ಅವಧಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಪೂರ್ಣ ಗುರಿಸಾಧಿಸಿವೆ. ಆದರೆ ಉಳಿದ ಇಲಾಖೆಗಳು ಪ್ರಗತಿ ಸಾಧಿಸುವಲ್ಲಿ ಹಿಂದುಳಿದಿವೆ.
ಎಸ್‍ಸಿಪಿ ಮತ್ತು ಟಿಎಸ್‍ಪಿ ಉಪಯೋಜನೆ ಅಡಿಯಲ್ಲಿ ಕೈಗೊಳ್ಳುವ ಕಾಮಗಾರಿಗಳು ಗುಣಮಟ್ಟದಾಗಿರಬೇಕು ಮತ್ತು ಕಾಮಗಾರಿಗಳನ್ನು ಜೀಯೋ ಟ್ಯಾಗ್ ಮಾಡಿ ಛಾಯಾಚಿತ್ರದೊಂದಿಗೆ ನೊಡಲ್ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಗೆ ತಪ್ಪದೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ವ್ಯಕ್ತಿಗತ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಮತ್ತು ಆಯ್ಕೆಯಾದವರಿಗೆ ಆದೇಶಪತ್ರದ ಹಂಚಿಕೆ ಬಾಕಿ ಉಳಿದಿದೆ. ಇಲಾಖಾ ಅಧಿಕಾರಿಗಳು ಖುದ್ದು ಮುತುವರ್ಜಿವಹಿಸಿ, ಶಾಸಕರ ಅಧ್ಯಕ್ಷತೆಯ ಸಭೆ ಸಂಯೋಜಿಸಿ, ಫಲಾನುಭವಿಗಳ ಆಯ್ಕೆ ಪಟ್ಟಿಗೆ ಅನುಮೊದನೆ ಪಡೆಯಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರಗೊಳಿಸಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರಿ ಅವರು ಮಾತನಾಡಿ, ಎಸ್‍ಸಿಪಿ ಮತ್ತು ಟಿಎಸ್‍ಪಿ ಉಪಯೋಜನೆಯಡಿ ಕಾರ್ಯಕ್ರಮಗಳಿಗಾಗಿ ಕೇಂದ್ರ ವಲಯ ಮತ್ತು ರಾಜ್ಯ ವಲಯ ಸೇರಿ ಜಿಲ್ಲೆಗೆ ಒಟ್ಟು 20578.63 ಲಕ್ಷ ರೂ.ಗಳ ಆರ್ಥಿಕ ಗುರಿ ಹೊಂದಲಾಗಿತ್ತು. ಆಗಸ್ಟ್ ಮಾಸಾಂತ್ಯದವರೆಗೆ 10102.84 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಶೇ 45% ರಷ್ಟು ಪ್ರಗತಿ ಸಾಧಿಸಲಾಗಿದೆ. ಉಪಯೋಜನೆಯಡಿ ಕೈಗೊಳ್ಳುವ ಕಾರ್ಯಕ್ರಮಗಳ ಪ್ರಗತಿ ಕುರಿತು ಛಾಯಾಚಿತ್ರಗಳೊಂದಿಗೆ ವಿವರವಾದ ವರದಿಯನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು ಪ್ರತಿ ತಿಂಗಳು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕೆಂದು ಅವರು ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ ಮಾತನಾಡಿ, ಎಸ್‍ಸಿಪಿ ಮತ್ತು ಟಿಎಸ್‍ಪಿ ಉಪಯೋಜನೆಯಡಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಿಗಧಿತ ಗುರಿಯನ್ವಯ ಪ್ರಗತಿಯಾಗಿದೆ. ಕಾಮಗಾರಿಗಳಿಗೆ ಟೆಂಡರ್ ಕೊಡಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಪಂಚಾಯತ ಯೋಜನಾ ನಿರ್ದೇಶಕ ದೀಪಕ ಮಡಿವಾಳರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ವ್ಹಿ.ಬಿ.ಯಮಕನಮರಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಪರಮೇಶ್ವರ ನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ.ರಾಮಚಂದ್ರ ಮಡಿವಾಳ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ, ಪ್ರವಾಸೊದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ರೆಹಮತ ನದಾಫ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೃಷಿ ವಿ.ವಿ. ಹಾಗೂ ಕ.ವಿ.ವಿ., ಕಾನೂನು ವಿಶ್ವವಿದ್ಯಾಲಯದ ಅಧಿಕಾರಿಗಳು ಭಾಗವಹಿಸಿ, ಇಲಾಖಾವಾರು ಸಾಧಿಸಿದ ಕಾರ್ಯಕ್ರಮಗಳ ಪ್ರಗತಿ ವರದಿ ನೀಡಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...