ಕಲ್ಯಾಣ ಕರ್ನಾಟಕದಿಂದಲೆ ಸ್ವಚ್ಛ ಕರ್ನಾಟಕವಾಗಲು ಸಂಕಲ್ಪ ಮಾಡಿ -ನ್ಯಾಯಮೂರ್ತಿ ಸುಭಾಷ ಬಿ.ಆಡಿ

Source: so news | Published on 13th September 2019, 12:17 AM | State News | Don't Miss |

ಕಲಬುರಗಿ: ಪ್ರತಿ ಮನೆಯಿಂದ ಒಣ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಘನತ್ಯಾಜ್ಯ ಮತ್ತು ಆಸ್ಪತ್ರೆಯಿಂದ ಉತ್ಪತ್ತಿಯಾಗುವ ಜೈವಿಕ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ಇಲ್ಲಿನ ಸಂಸ್ಥೆಗಳು ನಿರ್ವಹಣೆ ಮಾಡಿ ಶೇ.100ರಷ್ಟು ಪ್ರಗತಿ ಸಾಧಿಸುವ ಮೂಲಕ ಕಲ್ಯಾಣ ಕರ್ನಾಟಕದಿಂದಲೆ ಬರುವ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದ ಹೊತ್ತಿಗೆ ಸ್ವಚ್ಛ ಕರ್ನಾಟಕವಾಗಲು ಎಲ್ಲರು ಸಂಕಲ್ಪ ಮಾಡಿ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ ಬಿ.ಆಡಿ ಅವರು ಕರೆ ನೀಡಿದರು.

ಗುರುವಾರ ಇಲ್ಲಿನ ಮಹಾನಗರ ಪಾಲಿಕೆಯ ಟೌನ್ ಹಾಲ್ ಸಭಾಂಗಣದಲ್ಲಿ ಸ್ವಚ್ಛ ಸರ್ವೇಕ್ಷಣ-2020 ಕುರಿತು ಕಲಬುರಗಿ ವಿಭಾಗೀಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯೋತ್ಸವಕ್ಕೆ ಜನತೆಗೆ ಸ್ವಚ್ಛ, ಸುಂದರ ಮತ್ತು ಹಸಿರು ನಗರಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು ಸ್ಥಳಿಯ ಸಂಸ್ಥೆಗಳ ಮುಖ್ಯಸ್ಥರಿಗೆ ಹೇಳಿದರು.
ದೇಶದಾದ್ಯಂತ ಸ್ವಚ್ಛ ಸರ್ವೇಕ್ಷಣ ಕಾರ್ಯ ನಡೆಯುತ್ತಿದ್ದು, ಇದು 2020ರ ಮಾರ್ಚ್ ವರೆಗೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ವಾಯು ಮಾಲಿನ್ಯ ಮತ್ತು ಜಲ ಮಾಲಿನ್ಯ ತಡೆಗಟ್ಟುವಲ್ಲಿ ಮತ್ತು ಘನತ್ಯಾಜ್ಯ ಮತ್ತು ಜೈವಿಕ ತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ಕೈಗೊಂಡ ಕೆಲಸ ಕಾರ್ಯಗಳ ಆಧಾರದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ರ್ಯಾಂಕಿಂಗ್ ನೀಡಲಿದೆ. ಇಂದೋರ್ ನಗರ ಪ್ರಸ್ತುತ ದೇಶದ ಸ್ವಚ್ಛ ನಗರವಾಗಿದ್ದು, ಹಿಂದೆ ಮೈಸೂರು ಆ ಸ್ಥಾನದಲ್ಲಿತ್ತು ಎಂದರು.
ಕೇವಲ ರ್ಯಾಂಕಿಂಗ್ ಪಡೆಯಲು ಕೆಲಸ ಮಾಡುವುದು ಬೇಡ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವುದು ನಮ್ಮ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸೇವಾ ಸಂಸ್ಥೆಗಳು, ಸಾರ್ವಜನಿಕರ ಸಹಭಾಗಿತ್ವದಿಂದ ಈ ಕಾರ್ಯ ಸಾಧ್ಯವಾಗಿದೆ. ಸ್ಥಳೀಯ ಸಂಸ್ಥೆಗಳು ಕ್ರಿಯಾಶೀಲ ಆಧಾರಿತ ಯೋಜನೆಗಳನ್ನು (ಮೈಕ್ರೋ ಯೋಜನೆ) ಹಾಕಿಕೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬಹುದಾಗಿದೆ ಎಂದ ಅವರು ಮಾರ್ಚ್-2020ರಳಗೆ ತಮ್ಮ ಪ್ರಗತಿ ಸಾಧಿಸುವುದು ಅನಿವಾರ್ಯ ಎಂದರು.
ಧಾರ್ಮಿಕ ಸಂಸ್ಥೆಗಳು, ಶಾಪಿಂಗ್ ಮಾಲ್‍ಗಳಿಗೆ ಹೊಣೆಗಾರಿಕೆ ನೀಡಿ: ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಉತ್ಪತ್ತಿಯಾಗುವ ಧಾರ್ಮಿಕ ಸಂಸ್ಥೆಗಳು, ಶಾಲಾ-ಕಾಲೇಜುಗಳು, ಶಾಪಿಂಗ್ ಮಾಲ್, ಹೋಟೆಲ್, ರೆಸ್ಟೋರೆಂಟ್‍ಗಳ ಮುಖ್ಯಸ್ಥರಿಗೆ ಘನತ್ಯಾಜ್ಯ ಮತ್ತು ಜೈವಿಕ ತ್ಯಾಜ್ಯದ ವಿಲೇವಾರಿಯ ಹೊಣೆಗಾರಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ಲಾಸ್ಟಿಕ್ ನಿಯಂತ್ರಣಕ್ಕೆ ದಂಡವೆ ಮದ್ದು:- ರಾಜ್ಯದಲ್ಲಿ ಈಗಾಗಲೇ ಪ್ಲಾಸ್ಟಿಕ್ ಬಳಕೆ ಮಾರಾಟ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರ ಸಂಪೂರ್ಣ ಅನುಷ್ಟಾನಕ್ಕೆ ತರಲು ಸ್ಥಳೀಯ ಸಂಸ್ಥೆಗಳು ಕೂಡಲೇ ಬೈಲಾವನ್ನು ತಿದ್ದುಪಡಿ ಮಾಡಿ ಪ್ಲಾಸ್ಟಿಕ್ ಸಂಗ್ರಹಣೆ, ಬಳಕೆ ಮತು ಉತ್ಪಾದನೆಗೆ ನಿರ್ದಿಷ್ಟ ದಂಡದ ಮೊತ್ತವನ್ನು ಗೊತ್ತುಪಡಿಸಬೇಕು. ಬಿಗಿಯಾದ ಕಾನೂನು ಇರುವುದರಿಂದಲೆ ಸಿಂಗಾಪೂರ್ ದಂತಹ ದೇಶಗಳಲ್ಲಿ ಎಲ್ಲೆಂದರಲ್ಲಿ ಕಸ ಕಾಣುವುದಿಲ್ಲ. ಕಸ ಬಿಸಾಡಿದಲ್ಲಿ ದಂಡ ಹಾಕುತ್ತಾರೆ ಎಂಬ ಭಯ ಇದೆ. ಹಾಗೆಯೆ ಇಲ್ಲಿಯೂ ಕಾಯ್ದೆ ಉಲ್ಲಂಘಿಸುವವರಿಗೆ ದಂಡ ಹಾಕುವುದೇ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮದ್ದು ಎಂದರು.
ಸಿಮೆಂಟ್ ಕಂಪನಿಗಳಿಗೆ ಆರ್.ಡಿ.ಎಪ್. ಕೊಡಿ:- ವೈಜ್ಞಾನಿಕವಾಗಿ ಘನತ್ಯಾಜ್ಯ ನಂತರ ಉಪಯೋಗಕ್ಕೆ ಬಾರದ ಆರ್.ಡಿ.ಎಫ್.ಅನ್ನು ಸಿಮೆಂಟ್ ಕಂಪನಿಗಳು ಇಂಧನ ಉತ್ಪಾದನೆ ಬಳಸುತ್ತವೆ. ಈ ಭಾಗದಲ್ಲಿ ಬಹಳಷ್ಟು ಸಿಮೆಂಟ್ ಕಂಪನಿಗಳು ಇಲ್ಲಿರುವುದರಿಂದ ಅವರೆಲ್ಲರು ಆರ್.ಡಿ.ಎಫ್. ಪಡೆಯಲು ಒಪ್ಪಿಕೊಂಡಿದ್ದಾರೆ. ಸ್ಥಳೀಯ ಸಂಸ್ಥೆಗಳು ಸುಡುವ ಸಾಮಥ್ರ್ಯವಿರುವ ಆರ್.ಡಿ.ಎಫ್. ಸಿಮೆಂಟ್ ಕಂಪನಿಗಳಿಗೆ ನೀಡುವ ಮೂಲಕ ಶೇ.100ರಷ್ಟು ಘನತ್ಯಾಜ್ಯ ವಿಲೇವಾರಿ ಪ್ರಗತಿ ಸಾಧಿಸಬಹುದು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಬಿ.ಶರತ್ ಮಾತನಾಡಿ ಇತರೆ ಸಿವಿಲ್ ಕಾಮಗಾರಿಗಳಂತೆ ಪರಿಸರ ಸಂರಕ್ಷಣೆ, ತ್ಯಾಜ್ಯ ವಿಲೇವಾರಿ, ಪ್ಲಾಸ್ಟಿಕ್ ನಿಯಂತ್ರಣ ಕೆಲಸವನ್ನು ನೋಡಬಾರದು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದು ಎಲ್ಲರಲ್ಲಿ ಮನ ಪರಿವರ್ತನೆಯಾಗಬೇಕಿದೆ. ಸ್ವಚ್ಛ ಸರ್ವೇಕ್ಷಣ-2020ರಲ್ಲಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳು ಉತ್ತಮ ರ್ಯಾಂಕಿಂಗ್ ಪಡೆಯುವತ್ತ ಕಾರ್ಯನಿರ್ವಹಿಸಬೇಕು ಎಂದರು.
ಪೌರಾಡಳಿತ ನಿರ್ದೇಶನಾಲಯದ ಘನ ತ್ಯಾಜ್ಯ ನಿರ್ವಹಣೆಯ ಕಾರ್ಯನಿರ್ವಾಹಕ ಅಭಿಯಂತ ಸೋಮೇಶ್ವರ ಮಾತನಾಡಿ ಘನತ್ಯಾಜ್ಯ ನಿರ್ವಹಣೆ ಕಾಯ್ದೆ-2016ರಲ್ಲಿ ತಿಳಿಸಿರುವಂತೆ ಶೇ100ರಷ್ಟು ವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ, ಶೌಚಾಲಯದ ವ್ಯವಸ್ಥೆ, ಸೂಕ್ತ ಕಂಪೋಸ್ಟಿಂಗ್ ಯಾರ್ಡ್, ವಿಕೇಂದ್ರೀಕರಣದಲ್ಲಿ ಕಂಪೋಸ್ಟ್ ವ್ಯವಸ್ಥೆ ಇವೆಲ್ಲವುಗಳನ್ನು ಒಳಗೊಂಡಂತೆ ನವೆಂಬರ್ 1ಕ್ಕೆ ರಾಜ್ಯದ ರಾಯಚೂರು, ಬೆಳಗಾವಿ, ಕಾರವಾರ, ಮೈಸೂರು, ಉಲ್ಲಾಳ, ಮಂಗಳೂರು ಮತ್ತು ಹುಣಸೂರು ನಗರ-ಪಟ್ಟಣಗಳನ್ನು ಮಾದರಿ ನಗರವನ್ನಾಗಿಸಲು ಗುರಿ ಹೊಂದಲಾಗಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ರಾಜ್ಯದ 220 ನಗರ-ಪಟ್ಟಣಗಳನ್ನು ಬಯಲು ಶೌಚಮುಕ್ತ ಪಟ್ಟಣಗಳೆಂದು ಘೋಷಿಸಲಾಗಿದೆ ಎಂದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತ ಹಾಹುಲ ಪಾಂಡ್ವೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸೋಮಪ್ಪ ಕಡಕೋಳ, ಬಳ್ಳಾರಿ ಡಿಯುಡಿಸಿ ಪಿಡಿ ರಮೇಶ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಮುಖ್ಯ ಅಭಿಯಂತ ದಿನೇಶ ರಾವ್, ಡಿಯುಡಿಸಿ ಕಾರ್ಯನಿವಾಹಕ ಅಭಿಯಂತ ಶಿವಣಗೌಡ ಪಾಟೀಲ ಸೇರಿದಂತೆ ಕಲಬುರಗಿ ವಿಭಗದ ಆರು ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪೌರಾಯುಕ್ತರು, ಪರಿಸರ ಅಭಿಯಂತರು, ಆರೋಗ್ಯ ನಿರೀಕ್ಷಕರು ಇದ್ದರು.
ಪೌರಾಡಳಿತ ನಿರ್ದೇಶನಾಲಯದ ಘನ ತ್ಯಾಜ್ಯ ನಿರ್ವಹಣೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ಸೋಮೇಶ್ವರ ಅವರು ಪಿ.ಪಿ.ಟಿ. ಮೂಲಕ ಸ್ವಚ್ಛ ಸರ್ವೇಕ್ಷಣ-2020ರ ಕುರಿತು ಸವಿಸ್ತಾರವಾಗಿ ವಿವರಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...