ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

Source: SO News | By Laxmi Tanaya | Published on 20th January 2021, 9:32 PM | Coastal News | Don't Miss |

ಮಂಗಳೂರು : ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪ್ರತಿಶತ ನೂರರಷ್ಟು ಪೂರ್ಣಗೊಳಿಸಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಅವರು ಬುಧವಾರ ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿಕೈಗೊಂಡಿರುವ ಕಾಮಗಾರಿಗಳ  ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ  ವತಿಯಿಂದ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಜನವರಿ ಮಾಹೆ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಪ್ರಸ್ತುತಅನುಮೋದನೆಗೆ ಸಲ್ಲಿಸಿರುವ 80 ಕಾಮಗಾರಿಗಳನ್ನು ಮಾರ್ಚ್‍ಎರಡನೇ ವಾರದೊಳಗಾಗಿ ಪೂರ್ಣಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿಒಟ್ಟಾರೆ 94 ಕಾಮಗಾರಿಗಳನ್ನು 8.07 ಕೋಟಿರೂ.ಗಳ ಮೊತ್ತದಲ್ಲಿ ಕೈಗೊಳ್ಳಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ ಅವರು ಬಿಡುಗಡೆ ಮಾಡಿದ ಅನುದಾನವನ್ನು ಯಾವುದೇ ಕಾರಣಕ್ಕೂ  ವ್ಯರ್ಥವಾಗದಂತೆಎಚ್ಚರ ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‍ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು , ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮಂಡಳಿ ಸದಸ್ಯರಾದ ರಾಮ ಅಮಿನ್ ಪಚ್ಚಾಡಿ ಹಾಗೂ ಮಂಡಳಿಯ ಕಾರ್ಯದರ್ಶಿ ಕೆ.ಎಸ್. ಮಣಿ,  ಲೋಕೋಪಯೋಗಿ ಇಲಾಖೆ, ಪಂಚಾಯತ್‍ರಾಜ್‍ ಇಂಜಿನಿಯರಿಂಗ್ ವಿಭಾಗ, ಕರ್ನಾಟಕ ರೂರಲ್‍ ಇನ್ಫಾಸ್ಟ್ರಕ್ಚರ್‍ ಡೆವಲಪ್‍ಮೆಂಟ್ ಲಿಮಿಟೆಡ್, ಮಹಾನಗರ ಪಾಲಿಕೆ ಅಭಿಯಂತರುಗಳು  ಮಂಗಳೂರು ಹಾಗೂ ನಿರ್ಮಿತಿಕೇಂದ್ರಯೋಜನಾ ನಿರ್ದೇಶಕ  ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Read These Next