ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಮಲಪ್ರಭಾ ಕುಡಿಯುವ ನೀರು ; 1500 ಕೋಟಿ ರೂ.ಯೋಜನೆ - ಸಚಿವ ಜಗದೀಶ ಶೆಟ್ಟರ್

Source: so news | Published on 7th December 2019, 11:41 PM | State News | Don't Miss |


ಧಾರವಾಡ: ಜಿಲ್ಲೆಯ ಎಲ್ಲಾ ಶಾಸಕರ ಆಸಕ್ತಿ ಮತ್ತು ಕಾಳಜಿಯಿಂದಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಮಲಪ್ರಭಾ ನದಿ ಮೂಲದಿಂದ ಕುಡಿಯುವ ನೀರು ಪೂರೈಸಲು, 1500 ಕೋಟಿ ರೂ.ಗಳ ವಿಸ್ತ್ರತ ಯೋಜನಾ ವರದಿ ತಯಾರಿಸಲಾಗಿದೆ. ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.

ಆಲೂರು ವೆಂಕಟರಾವ್ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಧಾರವಾಡ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ನದಿಮೂಲದ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವರೂ ಕೂಡ ಒಪ್ಪಿಗೆ ನೀಡಿದ್ದಾರೆ. ಸಚಿವ ಸಂಪುಟದ ಒಪ್ಪಿಗೆ ಪಡೆದು ಬರುವ ಜನೆವರಿಯಲ್ಲಿ ಯೋಜನೆ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರೈತರಿಗೆ ಕೃಷಿ ಸಾಲ ವಿತರಿಸುವ ವಿಧಾನವನ್ನು ರಾಷ್ಟ್ರೀಕೃತ ಬ್ಯಾಂಕುಗಳು ಸಾಧ್ಯವಾದಷ್ಟು ಸರಳೀಕರಣ ಮಾಡಬೇಕು. ಗ್ರಾಮೀಣ ಭಾಗಗಳ ರೈತರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಸಾಲ ಪಡೆಯಲು ಅವರು  ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಚಿವರು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.
ಶಾಸಕ ಅಮೃತ ದೇಸಾಯಿ ಮಾತನಾಡಿ, ಈ ಬಾರಿ ತೇವಾಂಶ ಹೆಚ್ಚಿಗೆ ಇರುವುದರಿಂದ ಇದುವರೆಗೆ ಮಾವು ಬೆಳೆ ಹೂ ಬಿಟ್ಟಿಲ್ಲ. ರೈತರು ಆತಂಕದಲ್ಲಿದ್ದಾರೆ. ಮಾವು ಬೆಳೆಗಾರರಿಗೆ ವಿಮಾ ಸೌಲಭ್ಯ ಪಡೆಯಲು ಹೆಚ್ಚು ಅರಿವು ಮೂಡಿಸಬೇಕು. ಗ್ರಾಮೀಣ ರಸ್ತೆಗಳು ಸಂಪೂರ್ಣ ಹದಗೆಟ್ಟಿರುವುದರಿಂದ ರೈತರು ಹೊಲಗಳಿಗೆ ತೆರಳಲು ತೊಂದರೆಯಾಗಿದೆ. ಅವುಗಳನ್ನು ಸಂಚಾರಯೋಗ್ಯವಾಗಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು.
ಜಂಟಿ ಕೃಷಿ ನಿರ್ದೇಶಕ ಎಸ್.ಎಸ್. ಅಬೀದ್ ಮಾತನಾಡಿ,  ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2019-20 ನೇ ಸಾಲಿನ ಹಿಂಗಾರು ಹಂಗಾಮಿಗೆ 1,29,447 ರೈತರು ಹಾಗೂ ಮುಂಗಾರು ಹಂಗಾಮಿಗೆ 1,05,170 ರೈತರು ನೋಂದಣಿ ಮಾಡಿಕೊಂಡಿದ್ದಾರೆ.
2018-19 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 93,904 ರೈತರು ನೋಂದಾಯಿಸಿಕೊಂಡು, 17.463 ಕೋಟಿ ರೂ.ವಿಮಾ ಕಂತು ಪಾವತಿಸಿದ್ದಾರೆ. ಒಟ್ಟು 44,834 ರೈತರಿಗೆ 105.809 ಕೋಟಿ ರೂ.ಪರಿಹಾರ ಘೋಷಿಸಲಾಗಿದೆ. 3967 ರೈತರಿಗೆ 8.229 ಕೋಟಿ ರೂ.ಪಾವತಿ ಬಾಕಿ ಇದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಹಾನಿಗೆ ಒಳಗಾದ ಮನೆಗಳ ಸಮೀಕ್ಷೆ ಮಾಡಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸಮೀಕ್ಷೆ ಪೂರ್ಣಗೊಂಡ ನಂತರದಲ್ಲೂ ಜಿಲ್ಲೆಯಲ್ಲಿ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಅಧಿಕಾರಿಗಳಿಂದ ಪರಿಶೀಲನೆ ಮುಗಿದಿದ್ದು, ಸರ್ಕಾರದ ಆದೇಶ ಬಂದ ತಕ್ಷಣ ಅವುಗಳನ್ನು ಸಹ ದಾಖಲಿಸಿ, ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದು ಹೇಳಿದರು. 
ಅಪರಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ, ಅತಿಯಾದ ಮಳೆ ಹಾನಿಯಿಂದಾಗಿ ಜಿಲ್ಲೆಯಲ್ಲಿ 128 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದ್ದು, ವಾಸಕ್ಕೆ ಯೋಗ್ಯವಾಗಿಲ್ಲ. ಇವು ಸೇರಿದಂತೆ 19857 ಮನೆಗಳಿಗೆ ಹಾನಿಯಾಗಿದ್ದು, ಈಗಾಗಲೇ ರೂ.105 ಕೋಟಿ ಪರಿಹಾರ ಪಾವತಿಸಲಾಗಿದೆ. ಉಳಿದ ಫಾಲಾನುಭವಿಗಳಿಗೂ ಪರಿಹಾರ ಪಾವತಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ, ಗ್ರಾಮೀಣ ಕುಡಿಯುವ ನೀರು, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ಜಲಮಂಡಳಿ, ಪಿಎಂಜಿವಾಯ್, ಪಶುಸಂಗೋಪನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ನಿಗಮ-ಮಂಡಳಿಗಳ ಅಧಿಕಾರಿಗಳು ಪ್ರಗತಿ ವರದಿ ಮಂಡಿಸಿದರು. 
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಕೆಂಪೇಗೌಡ ಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಚನ್ನಮ್ಮ ಶಿವನಗೌಡರ್, ನಿಂಗಪ್ಪ ಘಾಟೀನ್, ಕಲ್ಲಪ್ಪ ಪುಡಕಲಕಟ್ಟಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೆಲೀಸ್ ವರಿಧಿಕಾರಿ ವರ್ತಿಕಾ ಕಟಿಯಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶಕುಮಾರ್, ಉಪ ಪೆÇಲೀಸ್ ಆಯುಕ್ತ ಡಿ.ಎಲ್.ನಾಗೇಶ, ಪೆಬೆಷನರಿ ಐಎಎಸ್ ಅಧಿಕಾರಿ ಆಕೃತಿ ಬನ್ಸಾಲ್ ಮತ್ತಿತರರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...