ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ ಸಾಧ್ಯತೆ

Source: PTI | Published on 21st May 2021, 7:19 PM | National News |

ಕೋಲ್ಕತ್ತ: ‘ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಉಪ‍ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭವಾನಿಪುರ ಶಾಸಕ ಶೋಭನ್‌ದೇವ್‌ ಚಟ್ಟೋಪಾಧ್ಯಾಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ’ ಎಂದು ಟಿಎಂಸಿ ಮೂಲಗಳು ಹೇಳಿವೆ.

ಈ ಬಾರಿಯ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯ ಬೇಕಾದರೆ, ಆರು ತಿಂಗಳೊಳಗೆ ಅವರು ವಿಧಾನಸಭೆಗೆ ಮರು ಆಯ್ಕೆಯಾಗಬೇಕು. ಈ ಹಿನ್ನೆಲೆಯಲ್ಲಿ ಶೋಭನ್‌ದೇವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ.

‘ಈ ಬಗ್ಗೆ ಪ್ರತಿಕ್ರಿಯಿಸಿದ ಚಟ್ಟೋಪಾಧ್ಯಾಯ ಅವರು,‘ ಇದು ಪಕ್ಷದ ನಿರ್ಧಾರವಾಗಿದೆ. ನಾನು ಅದನ್ನು ಸಂತಸದಿಂದ ಪಾಲಿಸುತ್ತೇನೆ. ಭವಾನಿಪುರ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲಿದ್ದೇನೆ’ ಎಂದು ಅವರು ಹೇಳಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...