ಕೋಲ್ಕತಾ: ನಂದಿಗ್ರಾಮದಲ್ಲಿ ಮಮತಾ ಮೇಲೆ ದಾಳಿ

Source: VB | By S O News | Published on 11th March 2021, 2:15 PM | National News |

ಕೋಲ್ಕತಾ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ತೆರಳಿದ್ದ ತನ್ನ ಮೇಲೆ ದಾಳಿ ನಡೆಸಲಾಗಿದೆ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಕಾರಿನೊಳಗೆ ಹೋಗಲು ಮುಂದಾದ ಸಂದರ್ಭ #ನಾಲೈದು ವ್ಯಕ್ತಿಗಳು ತನ್ನನ್ನು ತಳ್ಳಿದ್ದಾರೆ. ಆಗ ತಾನು ಕೆಳಕ್ಕೆ ಬಿದ್ದಿದ್ದು ಕಾಲು ಬಾತುಕೊಂಡಿದೆ. ಇದೊಂದು ಪೂರ್ವಯೋಜಿತ ಷಡ್ಯಂತ್ರವಾಗಿದೆ. ಈ ಘಟನೆ ನಡೆದಾಗ ಅಲ್ಲಿ ಯಾವ ಪೊಲೀಸರೂ ಇರಲಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಂದಿಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಬೇಕಿದ್ದ ಮಮತಾ ಬಳಿಕ ಕೋಲ್ಕತ್ತಾಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

ಭದ್ರತಾ ಸಿಬ್ಬಂದಿ ಮಮತಾ ಬ್ಯಾನರ್ಜಿಯನ್ನು ಎತ್ತಿಕೊಂಡು ಬಂದು ಕಾರಿನ ಹಿಂಬದಿಯ ಸೀಟಿನಲ್ಲಿ ಕುಳ್ಳಿರಿಸಿದ ದೃಶ್ಯ ಕಂಡುಬಂದಿದೆ. ಮಮತಾ ಅವರ ಕಾಲು, ಮುಖಕ್ಕೆ ಗಾಯವಾಗಿದ್ದು ಅವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ಹೇಳಿವೆ. ಬಂಗಾಳ ಪೊಲೀಸ್ ಇಲಾಖೆಯ ಮಹಾನಿರ್ದೇಶಕರಾಗಿದ್ದ ವೀರೇಂದರ್‌ರನ್ನು ಮಂಗಳವಾರ ಚುನಾವಣಾ ಆಯೋಗ ವರ್ಗಾಯಿಸಿತ್ತು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...