ಅಡಿಕೆ ಮರದಿಂದ ಕೆಳಕ್ಕೆ ಬಿದ್ದು ವ್ಯಕ್ತಿ ಸಾವು

Source: S O News Service | By I.G. Bhatkali | Published on 11th November 2019, 3:05 PM | Coastal News |

ಭಟ್ಕಳ: ಅಡಿಕೆ ಕೀಳಲು ಮರವೇರಿದ ವ್ಯಕ್ತಿಯೋರ್ವ ತುಂಡಾದ ಮರದೊಂದಿಗೆ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಸಣ್ಣು ಸೋಮಯ್ಯ ಗೊಂಡ (57) ಎಂದು ಗುರುತಿಸಲಾಗಿದೆ. ಮೃತರು ಹೆಂಡತಿ ಹಾಗೂ ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...