ಯುವಕನಿಗೆ ಒಂದೇ ಬಾರಿ 2 ಡೋಸ್ ಲಸಿಕೆ!; ಸುಳ್ಯದಲ್ಲಿ ಆರೋಗ್ಯ ಸಹಾಯಕಿ ಅಚಾತುರ್ಯ

Source: VB | By I.G. Bhatkali | Published on 4th September 2021, 6:45 PM | Coastal News | State News |

ಸುಳ್ಯ: ತಾಲೂಕಿನ ದುಗಲಡ್ಕ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಕೊರೋನ ಲಸಿಕೆ ಶಿಬಿರದಲ್ಲಿ ಯುವಕನೋರ್ವನಿಗೆ ಆರೋಗ್ಯ ಸಹಾಯಕಿಯೊಬ್ಬರು ಕೆಲವೇ ಕ್ಷಣಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ನೀಡಿದ ಘಟನೆ ಬುಧವಾರ ನಡೆದಿದೆ.

ದುಗಲಡ್ಕ ಪ್ರೌಢಶಾಲೆಯಲ್ಲಿ ಕೋವಿಡ್ ಲಸಿಕೆ ಶಿಬಿರ ನಡೆಯುತ್ತಿದ್ದು, ಕೂಟೇಲು ಸಿ.ಆರ್.ಸಿ.ಯ ಬಾಲಸುಬ್ರಹ್ಮಣ್ಯಂ ಎಂಬವರ ಪುತ್ರ ಕೆ.ಬಿ.ಅರುಣ್ ಪ್ರಥಮ ಹಂತದ ಡೋಸ್ ಪಡೆಯಲು ಬಂದಿದ್ದರು. ಈ ಸಂದರ್ಭ ಆರೋಗ್ಯ ಸಹಾಯಕಿ ಅರುಣ್‌ರಿಗೆ ಲಸಿಕೆ ನೀಡಿದರೆನ್ನಲಾಗಿದೆ. ಲಸಿಕೆ ತೆಗೆದುಕೊಂಡಿದ್ದರಿಂದ ಜ್ವರ ಬಂದರೆ ಇರಲೆಂದು ಮಾತ್ರೆ ತೆಗೆದುಕೊಳ್ಳುವ ಉದ್ದೇಶದಿಂದ ಅರುಣ್ ಅಲ್ಲೇ ಕುಳಿತಿದ್ದರು.

ಈ ವೇಳೆ ಆರೋಗ್ಯ ಸಹಾಯಕಿ ಅವರಿಗೆ ಮತ್ತೊಮ್ಮೆ ಕೋವಿಡ್ ಲಸಿಕೆ ಚುಚ್ಚಿದ್ದಾರೆ ಎಂದು ಹೇಳಲಾಗಿದೆ.

ವಿಷಯ ತಿಳಿದ ಮನೆಯವರು ಆತಂಕಗೊಂಡು ಆರೋಗ್ಯ ಸಹಾಯಕಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್‌ರನ್ನು ಮನೆಯವರು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಈ ವೇಳೆ “ಆತಂಕ ಪಡಬೇಕಾಗಿಲ್ಲ, ಸರಿಯಾಗಿ ಆಹಾರ ಸೇವನೆ ಮಾಡಲಿ” ಎಂದು ಡಾ. ನಂದಕುಮಾರ್ ಸೂಚಿಸಿದರೆಂದು ತಿಳಿದುಬಂದಿದೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...