ಸೌದಿಯಿಂದ ಮಂಗಳೂರು ಬಂದಿಳಿದ ಮಂಕಿಯ ವ್ಯಕ್ತಿ ಅಸ್ವಸ್ಥ; ಆಸ್ಪತ್ರೆಯಲ್ಲಿ ನಿಧನ

Source: sonews | By Staff Correspondent | Published on 2nd August 2020, 1:17 PM | Coastal News | Don't Miss |

ಭಟ್ಕಳ: ಸೌದಿ ಅರೆಬಿಯಾದ ಜಿದ್ದಾದಿಂದ ಮಂಗಳೂರಿಗೆ ಬಂದಿಳಿದ ಹೊನ್ನಾವರ ತಾಲೂಕಿನ ಮಂಕಿ ಪಟ್ಟಣದ 36 ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯಪೀಡಿತರಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರಯವ ಘಟನೆ ಶನಿವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಜರಗಿದೆ.

ಮೂಲಗಳ ಪ್ರಕಾರ, ಮೊಹಮ್ಮದ್ ತೌಫಿಕ್ ಖಾಜಿ ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದ ಜಿದ್ದಾ ಎಂಬಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 1 ರಂದು ಬೆಳಿಗ್ಗೆ 11.30 ರ ಸುಮಾರಿಗೆ ಜಿದ್ದಾದಿಂದ ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ಇವರು ಅಸ್ವಸ್ಥರಾದರು. ಅವರ ಸ್ಥಿತಿ  ತುಂಬಾ ಹದಗೆಟ್ಟಿರುವುದರನ್ನು ಅರಿತು ನೇರವಾಗಿ ವಿಮಾನ ನಿಲ್ದಾಣದಿಂದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. 

ಕರೋನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದ ಇವರ ವರದಿಯು ನೆಗೆಟಿವೆ ಆಗಿದೆ ಎಂದು ಹೇಳಲಾಗುತ್ತಿದೆ.  

ಮೃತದೇಹವನ್ನು ಹಿಂಪಡೆಯಲು ಮತ್ತು ಕಾಗದಪತ್ರಗಳನ್ನು ಪೂರ್ಣಗೊಳಿಸಲು ಮಂಕಿಯಲ್ಲಿರುವ ಸಂಬಂಧಿಕರೋರ್ವರು ಮಂಗಳೂರು ತಲುಪಿದ್ದು ಅಲ್ಲಿ ಭಟ್ಕಳ ಜಮಾಅತುಲ್ ಮುಸ್ಲಿಮೀನ್ ಮಂಗಳೂರು ಅವರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ  

ಮೃತ  ಮುಹಮ್ಮದ್ ತೌಫಿಕ್ ಮೂವರು ಮಕ್ಕಳು, ಪತ್ನಿ ಹಾಗೂ ಬಂದುಬಳಗವನ್ನು ಅಗಲಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...